ಬೆಳಗಾವಿ :ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ ಅಂಗವಾಗಿ ಚುನಾಚಣಾ ಪ್ರಣಾಳಿಕೆಯ ಮೊದಲ ಭರವಸೆಯಾಗಿ ಪ್ರತಿ ಮನೆಗೆ 200 ಯೂನಿಟ್ ವರೆಗೆಉಚಿತ ವಿದ್ಯುತ್.
ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ ಅಂಗವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಇಂದು ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಚುನಾಚಣಾ ಪ್ರಣಾಳಿಕೆಯ ಮೊದಲ ಭರವಸೆಯಾಗಿ ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಎಂದು ಘೋಷಿಸಲಾಯಿತು.
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ವಿಧಾನ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಭಾಗವಹಿಸಿದ್ದರು.
ವರದಿ: ನಂದಿನಿ ಮೈಸೂರು