
ಮೈಸೂರು: ಕೇಂದ್ರ ಇಂಟಲಿಜೆನ್ಸ್ ಬ್ಯೂರೋ ನಿವೃತ್ತ ಅಧಿಕಾರಿ ಹತ್ಯೆ.

ಮೈಸೂರಿನಲ್ಲಿ ಕೇಂದ್ರ ಇಂಟಲಿಜೆನ್ಸ್ ಬ್ಯೂರೋ ನಿವೃತ್ತ ಅಧಿಕಾರಿ ಹತ್ಯೆಯಾಗಿದೆ.ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಘಟನೆ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದಂತೆ ದುಷ್ಕರ್ಮಿಗಳು ಬಿಂಬಿಸಿದ್ದಾರೆ. ಆರ್.ಎಸ್. ಕುಲಕರ್ಣಿ (83) ಕೊಲೆಯಾದ ಇಂಟಲಿಜೆನ್ಸ್ ಬ್ಯುರೋದ ನಿವೃತ್ತ ಅಧಿಕಾರಿ.
ಶುಕ್ರವಾರ ಸಂಜೆ ಗಂಗೋತ್ರಿ ಕ್ಯಾಂಪಸ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದರು.
ಎದುರಿನಿಂದ ವಾಕ್ ಮಾಡಿ ಬರುತ್ತಿದ್ದವರಿಗೆ ಡಿಕ್ಕಿ ಹೊಡೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಕುಲಕರ್ಣಿ ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಇದೊಂದು
ಹಿಟ್ ಅಂಡ್ ರನ್ ಪ್ರಕರಣವೆಂದು ಭಾವಿಸಿದ್ದ ಪೊಲೀಸರಿಗೆ ಸಿಸಿ ಟಿವಿ ಪರಿಶೀಲನೆ ಮಾಡಿದಾಗ ಭಯಾನಕ ಸತ್ಯ ಬಯಲಾಗಿದೆ.
ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ.ರಸ್ತೆ ಬದಿಗೆ ನಿಂತಿದ್ದರೂ ಅಪಘಾತವೆಸಗಿ ಎಸ್ಕೆಪ್ ಆಗಿದ್ದಾರೆ.
ಘಟನಾ ಸ್ಥಳದಲ್ಲಿ ಕೃತ್ಯವೆಸಗಿದ ಕಾರಿನ ಮಿರರ್ ಪತ್ತೆಯಾಗಿದೆ. ಜಯಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಪ್ರಕಣರದ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದೇವೆ.
ಎಸಿಪಿ ನೇತೃತ್ವದಲ್ಲಿ ಮೂವರು ಪೊಲೀಸ್ ಅಧಿಕಾರಿಗಳ ತಂಡರಚಿಸಲಾಗಿದೆ ಶೀಘ್ರವೇ ಪ್ರಕರಣ ಬೇಧಿಸಲಿದ್ದೇವೆ.
ಕುಲಕರ್ಣಿಯವರು ನಿವೃತ್ತರಾಗಿ 23 ವರ್ಷಗಳಾಗಿವೆ.
ಕೊಲೆಗೆ ವೃತ್ತಿ ವೈಷಮ್ಯ ಅಥವಾ ವೈಯಕ್ತಿಕ ವೈಷಮ್ಯ ಕಾರಣವೇ ಎಂದು ಈಗಲೇ ಏನೂ ಹೇಳಲಾಗದು ಎಂದುಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಹೇಳಿದ್ದಾರೆ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.