ಬೆಂಗಳೂರು : ಡಿಕೆಶಿ ಭೇಟಿಯಾದ ಖ್ಯಾತ ನಟ ಸುದೀಪ್.
ನಟ ಕಿಚ್ಚ ಸುದೀಪ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಸುದೀಪ್ ಹಾಗೂ ಡಿಕೆಶಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇಬ್ಬರು ಭೇಟಿಯಾಗಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿವೆ. ಎಲ್ಲಾ ಪಕ್ಷಗಳು ಪ್ರಚಾರಕ್ಕಾಗಿ ಸೆಲೆಬ್ರಿಟಿಗಳ ಮೊರೆ ಹೋಗುತ್ತಿದ್ದು, ಪ್ರಮುಖರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸುದೀಪ್ ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸುದೀಪ್ ಕಾಂಗ್ರೆಸ್ಗೆ ಸೇರ್ಪಡೆ ಆಗಲಿದ್ದಾರೆ ಎನ್ನುವ ಮಾತುಗಳು ಕೆಲ ದಿನಗಳಿಂದ ಕೇಳಿಬರುತ್ತಿವೆ. ಆದರೆ, ಈ ಬಗ್ಗೆ ಅವರು ಅಧಿಕೃತವಾಗಿ ಹೇಳಿಕೊಂಡಿಲ್ಲ.
ವರದಿ: ನಂದಿನಿ ಮೈಸೂರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.