ಪಕ್ಷದ ಕಾರ್ಯಕರ್ತನಿಗೆ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಬಿಜೆಪಿ ನಾಯಕ

ಹಾಸನ: ಪಕ್ಷದ ಕಾರ್ಯಕರ್ತನಿಗೆ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಬಿಜೆಪಿ ನಾಯಕ.

ಬಿಜೆಪಿ ನಾಯಕರೊಬ್ಬರು ತನ್ನ ಪಕ್ಷದ ಕಾರ್ಯಕರ್ತನನ್ನು ಅಟ್ಟಾಡಿಸಿಕೊಂಡು ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ಅರಸೀಕೆರೆಯಲ್ಲಿ ನಡೆದಿದೆ.
ಬಿಜೆಪಿಯ ಕಾರ್ಯಕಮವೊಂದರಲ್ಲಿ ಅವಮಾನ ಮಾಡಿದ್ದಾನೆಂದು ವಿಜಯ್ ಕುಮಾರ್ ತನ್ನ ಕಾರು ಚಾಲಕನ ಜೊತೆ ಸೇರಿಕೊಂಡು ಕುಮಾರ್​ ಎಂಬ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ವರ್ಷದ ಹಿಂದೆ ಬಿಜೆಪಿ ಸಮಾವೇಶದ ವೇಳೆ ಅರಸೀಕೆರೆ ಬಿಜೆಪಿ ಟಿಕೇಟ್ ಆಕಾಂಕ್ಷಿ ಎನ್.ಆರ್.ಸಂತೋಷ್ ಹಾಗೂ ವಿಜಯ್ ಕುಮಾರ್ ಬಣದ ನಡುವೆ ಗಲಾಟೆ ನಡೆದಿತ್ತು. ಹಲ್ಲೆಗೊಳಗಾದ ಕುಮಾರ್ ಎನ್.ಆರ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೇ ಇತ್ತೀಚೆಗೆ ಬಿಜೆಪಿಯ ಬೂತ್​ ವಿಜಯ್ ಅಭಿಯಾನ​ ನಿಮಿತ್ತ ಗ್ರಾಮಗಳಿಗೆ ತೆರಳಿದ್ದ ವೇಳೆ ಕೆಲ ಜನರಿಂದ ವಿಜಯ್ ಕುಮಾರ್​ಗೆ ಅವಮಾನವಾಗಿತ್ತು. ಆ ಘಟನೆ ವೀಡಿಯೋ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಕೂಡ ಮಾಡಿದ್ದ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಕೋಪಗೊಂಡ ವಿಜಯ್ ಕುಮಾರ್ ಅರಸೀಕೆರೆ ನಗರಸಭೆ ಎದುರು ತಮ್ಮ ಕಾರು ಚಾಲಕನ ಜೊತೆ ಸೇರಿ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗಾಯಾಳು ಕುಮಾರ್ ಅವರನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *