“ನೇಕಾರ ಸಮ್ಮಾನ್ ಯೋಜನೆ”ಯಡಿ ವಿದ್ಯುತ್ಮಗ್ಗ ನೇಕಾರರಿಗೆ / ಕಾರ್ಮಿಕರಿಗೆ ಡಿ.ಬಿ.ಟಿ. ಮುಖಾಂತರ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದ– ಶ್ರೀಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರ ಗೃಹ ಕಛೇರಿ ಕೃಷ್ಣಾದಲ್ಲಿ ಆಯೋಜಿಸಿರುವ “ನೇಕಾರ ಸಮ್ಮಾನ್ ಯೋಜನೆ”ಯಡಿ ವಿದ್ಯುತ್ ಮಗ್ಗ ನೇಕಾರರಿಗೆ / ಕಾರ್ಮಿಕರಿಗೆ ಡಿ.ಬಿ.ಟಿ. ಮುಖಾಂತರ ಸಹಾಯಧನ ವರ್ಗಾವಣೆಗೆ ಚಾಲನೆಗೆ ನೀಡಿದರು.
ಜವಳಿ ಹಾಗೂ ಸಕ್ಕರೆ ಶಂಕರ ಪಾಟೀಲ ಮುನೇನಕೊಪ್ಪ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ಶಾಸಕರಾದ ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ, ಎಂ.ಡಿ. ಲಕ್ಷ್ಮೀನಾರಾಯಣ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷ ಗೌಡ, ಕಾವೇರಿ ಹ್ಯಾಂಡ್ಲೂಮ್ಸ್ ಅಧ್ಯಕ್ಷ ಬಿ.ಜೆ. ಗಣೇಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಸಣ್ಣ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಟಿ.ಎಚ್.ಎಂ. ಕುಮಾರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ವರದಿ: ನಂದಿನಿ ಮೈಸೂರು