ವಿವಾಹಿತ ಮಹಿಳೆ ಶಂಕಾಸ್ಪದ ಸಾವು-ಕೊಲೆ ಶಂಕೆ

ಬೆಂಗಳೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು-ಕೊಲೆ ಶಂಕೆ.

ಸುಬ್ರಮಣ್ಯಪುರದ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಂಡ್ಯ ಮೂಲದ ರಶ್ಮಿ (32) ಮೃತಪಟ್ಟವರು. ಪತಿಯೇ ಕೊಲೆಗೈದು
ನೇಣು ಹಾಕಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ರಶ್ಮಿ ಅವರು ಕಳೆದ 10 ವರ್ಷಗಳ ಹಿಂದೆ ಶ್ರೀರಂಗಪಟ್ಟಣ ಮೂಲದ ಅರವಿಂದ್ ಎಂಬಾತನೊಂದಿಗೆ ವಿವಾಹವಾಗಿದ್ದರು.

ದಂಪತಿಗೆ 5 ವರ್ಷದ ಗಂಡು ಮಗು ಇದೆ. ಅರವಿಂದ್ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದರೆ, ರಶ್ಮಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಪತಿಯ ಕುಟುಂಬಸ್ಥರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರೆ, ಪತ್ನಿಯ ಕುಟುಂಬಸ್ಥರು ಕೊಲೆ ಆರೋಪ ಹೊರಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಸುಬ್ರಮಣ್ಯಪುರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *