ಬಿಲ್ಲವ ಸಮಾಜದ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಉದ್ಘಾಟನಾ – ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು
ಸಾಗರ: ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಆದಿಶಕ್ತಿ ನಗರ ಚಿಪ್ಳಿಯಲ್ಲಿ ನಡೆದ ಬಿಲ್ಲವ ಸಮಾಜದ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು.
ಈ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು, ಸಿಗಂದೂರಿನ ಧರ್ಮದರ್ಶಿಗಳಾದ ರಾಮಪ್ಪನವರು, ಹಿರಿಯರು , ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರು, ಸಂಸದರಾದ ಬಿ.ವೈ.ರಾಘವೇಂದ್ರರವರು, ಮಾಜಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.