
ಏ.8ರ ನಂತರ BJP ಪಟ್ಟಿ ಬಿಡುಗಡೆ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಬಿಜೆಪಿ ಕೋರ್ ಕಮೀಟಿ ಸಭೆ ಬುಧವಾರವಷ್ಟೇ ಮುಗಿದಿದ್ದು, ಏ.8ರಂದು ಮತ್ತೂಮ್ಮೆ ಸಭೆ ನಡೆಸಿ ನಂತರ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ವಿಷಯದಲ್ಲಿ ನಾವು ಶ್ರದ್ಧೆ-ನಿಷ್ಠೆಯಿಂದ ನೊಂದ ದೀನದಲಿತ, ಹಿಂದುಳಿದ ವರ್ಗದ ಸಮುದಾಯಕ್ಕೆ ಶಾಶ್ವತವಾಗಿ ಪರಿಹಾರ ಕೊಡುವ ಕೆಲಸ ಮಾಡಿದ್ದೇವೆ. ನಾವು ಮಾಡಲಾಗದ್ದನ್ನು ಇವರು ಮಾಡಿದರಲ್ಲ ಎಂಬ ಅಪರಾಧ ಮನೋಭಾವ ಕಾಂಗ್ರೆಸ್‌ನವರನ್ನು ಕಾಡುತ್ತಿದೆ. ಮೀಸಲಾತಿ ವಿಚಾರವಾಗಿ ನಾವು ಕೈಗೊಂಡ ನಿರ್ಧಾರಗಳು ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದೆ. ನಾವು ರಾಜಕೀಯ ಇಚ್ಛಾಶಕ್ತಿ ಮೆರೆದರೆ, ಕಾಂಗ್ರೆಸ್‌ನದ್ದು ಡೋಂಗಿತನದ್ದಾಗಿದೆ ಎಂದು ಕುಟುಕಿದರು.
ಅಪರಾಧ ಹಿನ್ನೆಲೆಯುಳ್ಳವರಿಗೆ ಬಿಜೆಪಿ ಟಿಕೆಟ್ ನೀಡಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾನೂನು ಬಹಳ ಸ್ಪಷ್ಟವಾಗಿದೆ. ಪ್ರಕರಣಗಳು ವಿವಿಧ ಹಂತದಲ್ಲಿರುತ್ತವೆ. ಇದನ್ನೆಲ್ಲ ಗಮನಿಸಿ ಟಿಕೆಟ್ ನೀಡಲಾಗುವುದು. ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಮೂರ್‍ನಾಲ್ಕು ಹಂತದಲ್ಲಿ ಪರಿಶೀಲಿಸಿ ವರದಿ ಪಡೆಯಲಾಗಿದೆ. ಅದನ್ನೆಲ್ಲ ಗಮನದಲ್ಲಿಟ್ಟುಕೊಂಡು ಟಿಕೆಟ್ ನೀಡಲಾಗುವುದು ಎಂದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.