
ಚಾಮರಾಜನಗರ ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಪೊಲೀಸ್ ಕವಾಯಿತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ.
ಚಾಮರಾಜನಗರದ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಎಸ್ಪಿ ಕಚೇರಿ ಸಮೀಪವಿರುವ ಪೊಲೀಸ್ ಕವಾಯಿತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ ರವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಧ್ವಜ ದಿನಾಚರಣೆಕಾರ್ಯಕ್ರಮ ಯಶಸ್ವಿಯುತವಾಗಿ ನೆರವೇರಿತು. ಪೋಲಿಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಗೌರವ ಸಮರ್ಪಣೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ನಿವೃತ್ತ ಎಸ್.ಐ. ಸುಜಾತ ರವರು ಮಾತನಾಡಿ ಶಿಸ್ತಿನ ಇಲಾಖೆ ಎಂದರೆ ಅದು ಪೋಲಿಸ್ ಇಲಾಖೆ ಇಲ್ಲಿ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಕೆಲಸ ಮಾಡಲು ಬಹಳ ಹುಮ್ಮಸ್ಸು ಉತ್ತೇಜನ ಸಿಗುತ್ತದೆ. ಹಾಗಾಗಿ ಇಂತಹ ಅಧಿಕಾರಿಗಳ ಮಾರ್ಗದರ್ಶನ ಪಡೆದು ಕೆಲಸ ನಿರ್ವಹಿಸಲು ಹೆಮ್ಮೆಯಾಗುತ್ತದೆ.
ಪೋಲಿಸ್ ಇಲಾಖೆ ಇನ್ನೂ ಹೆಚ್ಚಿನ ಎತ್ತರಕ್ಕೆ ಸಾಗಲಿ ಎಂದು ಶುಭ ಹಾರೈಸಿದರು. ನಂತರ ಪೊಲೀಸ್ ಇಲಾಖೆ ಸಿಬ್ಬಂದಿಗಳು ಕವಾಯಿತು ಮೈದಾನದಲ್ಲಿ ಪಥಸಂಚನ ನಡೆಸಿದರು. ಇದೇ ಸಂದರ್ಭದಲ್ಲಿ ಡಿ.ವೈ.ಎಸ್ಪಿ. ಸುಮೇಗೌಡ, ಪ್ರಿಯದರ್ಶಿನಿ ಶಾಣೆಕೊಪ್ಪ, ಸನ್ಮಾನಿತ ಅಧಿಕಾರಿ ಸುಜಾತ, ದೊಡ್ಡಯ್ಯ, ಸೇರಿದಂತೆ ಇನ್ನೂ ಹಲವಾರು ಸಿಬ್ಬಂದಿ ವರ್ಗದವರು ಹಾಜರಾಗಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.