ಸಿಎಂ ಬೊಮ್ಮಾಯಿ ಇದ್ದ ಹೆಲಿಕಾಪ್ಟರ್ ಇಳಿಯುವಾಗ ಹೆಲಿಪ್ಯಾಡ್’ನಲ್ಲಿ ಬೆಂಕಿ ಅಪಾಯದಿಂದ ಪಾರು

ಉಡುಪಿ: ಸಿಎಂ ಬೊಮ್ಮಾಯಿ ಇದ್ದ ಹೆಲಿಕಾಪ್ಟರ್ ಇಳಿಯುವಾಗ ಹೆಲಿಪ್ಯಾಡ್’ನಲ್ಲಿ ಬೆಂಕಿ ಅಪಾಯದಿಂದ ಪಾರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಹೆಲಿಪ್ಯಾಡ್’ನಲ್ಲಿ ಬೆಂಕಿ ಕಾಣಿಸಿಕೊಂಡು ಬೊಮ್ಮಾಯಿ ಅವರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಕರಾವಳಿ ಜಿಲ್ಲೆಯಲ್ಲಿ ವಿವಿಧ ದೇವಸ್ಥಾನಗಳ ಪ್ರವಾಸದಲ್ಲಿರುವ ಅವರು ಇಂದು ದಂಪತಿ ಸಮೇತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಸಿಎಂ ಆಗಮಿಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಅವರು ಟೆಂಪಲ್ ರನ್ ಶುರು ಮಾಡಿದ್ದಾರೆ. ಹೀಗಾಗಿ ಉಡುಪಿಗೆ ಭೇಟಿ ನೀಡಿದ್ದು ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಆತಂಕ ಸೃಷ್ಟಿಯಾಗಿದ್ದು ಅದೃಷ್ಟವಶಾತ್ ಬೊಮ್ಮಾಯಿ ಸ್ವಲ್ಪದರಲ್ಲಿ ಬಚಾವ್ ಆಗಿದ್ದಾರೆ.

ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ನಟ ರಿಷಬ್ ಶೆಟ್ಟಿ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಆಕಸ್ಮಿಕವಾಗಿ ಇಬ್ಬರ ಭೇಟಿ ಆಗಿದೆ. ಮುಖ್ಯಮಂತ್ರಿಗಳನ್ನು ನೋಡುತ್ತಿದ್ದಂತೆ ನಟ ರಿಷಬ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಆಗ ರಿಷಬ್ ಬೆನ್ನು ತಟ್ಟಿ ಸಿಎಂ ಖುಷಿ ಪಟ್ಟರು. ಉಡುಪಿ ಪ್ರವಾಸದಲ್ಲಿದ್ದು ಮುಖ್ಯಮಂತ್ರಿ ಆಗಮಿಸಿದರೂ ಜಿಲ್ಲೆಯ ಐದು ಶಾಸಕರು ಗೈರಾಗಿದ್ದಾರೆ. ಬೈಂದೂರು ಎಂಎಲ್ ಎ ಸುಕುಮಾರ್ ಶೆಟ್ಟಿ ಗೈರಾಗಿದ್ದಾರೆ. ಶಾಸಕ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾಪು ಲಾಲಾಜಿ ಮೆಂಡನ್, ಟಿಕೆಟ್ ತಪ್ಪಿದ್ದಕ್ಕೆ ಬೇಸರದಲ್ಲಿರುವ ಮೂವರು ಶಾಸಕರು ಗೈರಾಗಿದ್ದಾರೆ. ಹಾಗೂ ಶಾಸಕ ಸುನಿಲ್ ಕುಮಾರ್ ಚುನಾವಣೆಯ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಹೀಗಾಗಿ ಬೊಮ್ಮಾಯಿ ಅವರಿಗೆ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್ ಸಾಥ್ ನೀಡಿದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *