ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ಸಂಚು-ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ಸಂಚು-ಸಿದ್ದರಾಮಯ್ಯ.

ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರನ್ನು ನೋಡಿದಾಗ ‘ ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ… ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ. ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿಯ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿಯನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ.ಎಸ್. ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು ಆರ್ ಎಸ್ ಎಸ್ ನ ‘ವಿಘ್ನ ಸಂತೋಷಿ’ಗಳೇ ಹೊರತು, ಕಾಂಗ್ರೆಸ್ ಪಕ್ಷ ಅಲ್ಲ. ಜಗದೀಶ್ ಶೆಟ್ಟರ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ‘ವಿಘ್ನ ಸಂತೋಷಿ’ ಗಳು. ಕಾಂಗ್ರೆಸ್ ಅಲ್ಲ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಗೆಲ್ಲುವ ಅವಕಾಶವೇ ಇಲ್ಲದ ವರುಣಾ ಕ್ಷೇತ್ರದಲ್ಲಿ ಒಲ್ಲೆನೆಂದರೂ ಬಲಾತ್ಕಾರವಾಗಿ ವಿ.ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿ ಮಾಡಿದ್ದು ಕೂಡಾ ಇದೇ ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು. ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್ ಪಾಟೀಲ್ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಇದೇ ಆರ್ ಎಸ್.ಎಸ್ ‘ವಿಘ್ನ ಸಂತೋಷಿ’ಗಳು. ಈಗ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಕೂಡಾ ಬಿ.ಎಸ್.ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಇವರಲ್ಲಿ ಯಾರೂ ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಆದರೆ ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ, ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ ಆರ್ ಎಸ್ ಎಸ್ ನ ‘ವಿಘ್ನ ಸಂತೋಷಿ’ಗಳ ಹುನ್ನಾರವೇ ಆಗಿದೆ ಎಂದು ಹೇಳಿದ್ದಾರೆ.

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

ಬದಲಾವಣೆಯ ಹೆಸರಲ್ಲಿ ಬಿಜೆಪಿಯೊಳಗಿನ ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು ಮಾಡುತ್ತಿರುವ ಈ ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ ತೆಗೆದುಕೊಳ್ಳುವ ರಾಜಕೀಯ ಕುತಂತ್ರವೇ ಆಗಿದೆ ಎನ್ನುವುದನ್ನು ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಮತ್ತು ಒಟ್ಟು ಲಿಂಗಾಯತ ಸಮುದಾಯ ಅರಿತುಕೊಳ್ಳಬೇಕಾಗಿದೆ. ಈಗಲೂ ಕಾಲ ಮಿಂಚಿಲ್ಲ, ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ ತಮ್ಮ ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ನಡೆಸಬೇಕೆಂದು ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *