
ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಪರ ಬೆಟ್ಟಿಂಗ್ : ಲಕ್ಷಾಂತರ ರೂ. ಅಗ್ರಿಮೆಂಟ್ ಮಾಡಲಾದ ಛಾಪಾಕಾಗದದ ಫೋಟೋ ವೈರಲ್…!!
ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಾಳೆ(ಶನಿವಾರ) ನಡೆಯಲಿದೆ. ಇದರ ನಡುವೆ ಅಭ್ಯರ್ಥಿಗಳ ಸೋಲು ಗೆಲುವಿನ ಬಗ್ಗೆ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಇದೀಗ ಮೈಸೂರಿನ ಹೆಚ್.ಡಿ ಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಪರ ಲಕ್ಷಾಂತರ ರೂ. ಬೆಟ್ಟಿಂಗ್ ಅಗ್ರಿಮೆಂಟ್ ಮಾಡಿಕೊಂಡಿರುವ ಛಾಪಾಕಾಗದದ ಫೋಟೋ ವೈರಲ್ ಆಗಿದೆ. ಹೆಚ್.ಡಿ ಕೋಟೆ ಕ್ಷೇತ್ರದ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಪರ 5ಲಕ್ಷದ ಬೆಟ್ಟಿಂಗ್ ಅಗ್ರಿಮೆಂಟ್ ಮಾಡಿಕೊಂಡಿರುವ ಛಾಪಾಕಾಗದದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಜಯರಾಮ ನಾಯಕ, ಪ್ರಕಾಶ್ ಹಾಗೂ ಶಿವರಾಜ್ ನಡುವೆ ಅಗ್ರಿಮೆಂಟ್ ಮಾಡಿಕೊಳ್ಳಲಾಗಿದ್ದು, ಪ್ರಕಾಶ್ ಹಾಗೂ ಶಿವರಾಜ್ ಜೆಡಿಎಸ್ ಅಭ್ಯರ್ಥಿ ಪರ ಮತ್ತು ಜಯರಾಮ ನಾಯ್ಕ ಕಾಂಗ್ರೆಸ್ ಅಭ್ಯರ್ಥಿ ಪರ ತಲಾ 5 ಲಕ್ಷ ಬೆಟ್ಟಿಂಗ್ ಕಟ್ಟಿ ಅಗ್ರಿಮೆಂಟ್ ಮಾಡಿಕೊಂಡಿದ್ದಾರೆ.
ಇಬ್ಬರ 10 ಲಕ್ಷ ಹಣವನ್ನ ಪೂಜಾ ಎಲೆಕ್ಟ್ರಾನಿಕ್ ಅಂಗಡಿ ಮಾಲೀಕ ನೇಮಿಚಂದ್ ಬಳಿ ನೀಡಲಾಗಿರುವ ಬಗ್ಗೆ ಉಲ್ಲೇಖವಾಗಿದ್ದು, ಒಂದು ವೇಳೆ ಬಿಜೆಪಿ ಗೆದ್ದರೆ ಇಬ್ಬರು ಹಣ ವಾಪಸ್ಸು ಪಡೆಯುವ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದಾರೆ.
ಮತದಾನ ಮೇ.10 ರಂದು ನಡೆದಿದ್ದು, ರಾಜ್ಯಾದ್ಯಂತ ಶೇ. 73.19 ಮತದಾನವಾಗಿದೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.