ಬೆಂಗಳೂರು: ವಿ.ಡಿ ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ಸಿಎಂ ಸರ್ಕಾರಿ ನಿವಾಸಕ್ಕೆ ಆಗಮಿಸಿದ ಅವರು ಘಟನೆಯ ಬಗ್ಗೆ ವಿವರಣೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ಫ್ಲೆಕ್ಸ್ ವಿವಾದದ ಹಿನ್ನಲೆಯಲ್ಲಿ ಶಿವಮೊಗ್ಗ ಉದ್ವಿಗ್ನಗೊಂಡಿದೆ. ವೀರ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಅಳವಡಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಸೋಮವಾರ ವಾಗ್ವಾದ ನಡೆದಿತ್ತು.ಇದರಿಂದ ಕೆಲಹೊತ್ತುಗಳ ಕಾಲ ಬಿಗುವಿನ ವಾತಾವರಣ ನಿರ್ಮಾನವಾಗಿತ್ತು.
ಈ ಮಧ್ಯೆ ಪ್ರೇಮ್ ಸಿಂಗ್ ಎಂಬುವವರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದರು. ಚೂರಿ ಇರಿತಕ್ಕೆ ಒಳಗಾದ ಪ್ರೇಮ್ ಸಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದೇ ವಿಚಾರವಾಗಿ ನಡೆದ ಕಲ್ಲುತೂರಾಟದಿಂದ ಸದ್ದಾಂ ಎಂಬುವವರಿಗೆ ಗಾಯವಾಗಿದೆ.
ಸದ್ಯ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನ ಆಗಿದೆ. ನೌಶಾದ್ ಅಲಿ ಹಾಗೂ ರೆಹಮಾನ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಈ ಘಟನೆಯ ಹಿನ್ನಲೆಯಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಘಟನೆಯನ್ನು ಸಿಎಂ ಬೊಮ್ಮಾಯಿ ಕೂಡಾ ಖಂಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಸೋಮವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ -2022 ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು, ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ ನಾಯಕರು ಸಹಕಾರ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದರು.
ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೋರ್ಸ್ ಕಳುಹಿಸಿದ್ದೇವೆ ,ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವರದಿ: ಸಿಂಚನಾ ಜಯಂತ್ ಬಲೇಗರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555