
ಬೆಂಗಳೂರು: ದೊಡ್ಡ ಆಲಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಹಾಗೂ ಮಾರಮ್ಮದೇವಿ ದೇಗುಲ ನೂತನ ವಿಗ್ರಹಗಳ ಪ್ರತಿಷ್ಠಾಪನೆ ನಿಮಿತ್ತ ಹೋಮ ಹವನಗ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಹುಟ್ಟೂರು ದೊಡ್ಡ ಆಲಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಹಾಗೂ ಮಾರಮ್ಮದೇವಿ ದೇಗುಲ ನೂತನ ವಿಗ್ರಹಗಳ ಪ್ರತಿಷ್ಠಾಪನೆ ನಿಮಿತ್ತ ಹೋಮ ಹವನಗಳಲ್ಲಿ ಪಾಲ್ಗೊಂಡರು. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು ಹೇಳಿದ್ದಿಷ್ಟು;
‘ನನಗೆ ಜನ್ಮ ಕೊಟ್ಟ ಊರಿದು. ಇದು ಊರಿನ ಐದನೇ ದೇವಸ್ಥಾನವಾಗಿದೆ. ಮರಳೇಗವಿಮಠದ ಶ್ರೀಗಳು ಹೇಳಿದಂತೆ, ಕನಕಪುರ ಕ್ಷೇತ್ರದಲ್ಲಿ ಸುಮಾರು 300ಕ್ಕೂ ಹೆಚ್ಚು ದೇವಾಲಯಗಳನ್ನು ಹೊಸದಾಗಿ ನಿರ್ಮಾಣ ಅಥವಾ ಜೀರ್ಣೋದ್ಧಾರ ಮಾಡಲಾಗಿದೆ. ನಮ್ಮ ಕ್ಷೇತ್ರದ ಜನತೆ ನೆಮ್ಮದಿ ಶಾಂತಿ, ಧರ್ಮ ಕಾಪಾಡಲಿ ಎಂದು ನಾವು ಸ್ಥಳೀಯರ ಸಹಕಾರದೊಂದಿಗೆ ಜೀರ್ಣೋದ್ಧಾರ ಮಾಡಿದ್ದೇವೆ. ಕಬ್ಬಾಳಮ್ಮ ದೇವಾಲಯ ಸೇರಿದಂತೆ ಅನೇಕ ದೇವಾಲಯಗಳು ಈ ಹಿಂದೆ ಹೇಗಿದ್ದವು ಎಂದು ನೀವೆಲ್ಲರೂ ನೋಡಿದ್ದೀರಿ. ಪಟ್ಲದಮ್ಮ ದೇವಾಲಯ ಕಟ್ಟಬೇಕಿದ್ದು, ಮುಂದೆ ಅದರ ಬಗ್ಗೆ ಗಮನ ಹರಿಸುತ್ತೇವೆ. ಇವೆಲ್ಲವನ್ನು ನಾನು ಉಳಿಸಿ ಬೆಳೆಸಿಕೊಂಡು ಹೋಗಬೇಕು.

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್-ಟೆಕ್ ಇಂಟರ್ನ್ಯಾಷನಲ್ Mob: 9880432555.
ಈ ಕ್ಷೇತ್ರದ ಸುಮಾರು ಶೇ. 20ರಷ್ಟು ಜನ ಉದ್ಯೋಗ ಅರರಿಸಿಕೊಂಡು, ಬದುಕಿಗಾಗಿ ಬೆಂಗಳೂರಿಗೆ ಸ್ಥಳಾಂತರವಾಗುತ್ತಿದ್ದು, ಎಲ್ಲರ ಸಂಪರ್ಕ ಇಟ್ಟುಕೊಂಡು ಇವುಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಈ ಕಾರ್ಯವನ್ನು ನಾನು ಅಥವಾ ಸುರೇಶ್ ಮಾತ್ರ ಮಾಡಿದ್ದೇವೆ ಎಂದೇನೂ ಅಲ್ಲ. ಸ್ಥಳೀಯರ ಸಹಕಾರ ಮುಖ್ಯವಾಗಿದೆ. ನಮ್ಮ ಧರ್ಮ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ.

ಆಕರ್ಷಕ ಕಮ್ಮಿ ಬಡ್ಡಿದರ ಗ್ರಹ ಸಾಲಕ್ಕಾಗಿ ಸಂಪರ್ಕಿಸಿ : 9535995455 , 9880432555.
ನಮ್ಮ ಎಲ್ಲ ಸಾಧನೆಗೆ ನಮ್ಮ ಕ್ಷೇತ್ರದ ಜನತೆಯೆ ಸಹಕಾರವೇ ಕಾರಣ. ಅದನ್ನು ಮರೆಯಲು ಸಾಧ್ಯವಿಲ್ಲ. ಅವರೆಲ್ಲರನ್ನೂ ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಯಂದು ತಿಳಿಸಿದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್-ಟೆಕ್ ಇಂಟರ್ನ್ಯಾಷನಲ್ Mob: 9880432555.