
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ “ಭಾರತ್ ಜೋಡೋ ಯಾತ್ರೆ”.

ಸದಾಶಿವನಗರದ ತಮ್ಮ ನಿವಾಸಕ್ಕೆ ಬುಧವಾರ ರಾತ್ರಿ ಭೇಟಿ ನೀಡಿದ ಭಾರತ್ ಜೋಡೋ ಯಾತ್ರೆ ರಾಷ್ಟ್ರೀಯ ಸಮಿತಿ ಅಧ್ಯಕ್ಷ, ಮಧ್ಯಪ್ರದೇಶ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡರು.
ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಉಸ್ತುವಾರಿ ವಹಿಸಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಸಂಸದ ಡಿ ಕೆ ಸುರೇಶ್, ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.
ವರದಿ : ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.