29 ರಂದು ಮಾನ್ಯ ಮುಖ್ಯಮಂತ್ರಿಗಳಿಂದ ಡಾ ವಿಷ್ಣು ವರ್ಧನ್ ಸ್ಮಾರಕ ಲೋಕಾರ್ಪಣೆ: ಜಿಲ್ಲಾಧಿಕಾರಿಗಳಿಂದ ಅಗತ್ಯ ಸಿದ್ದತೆಗಳ ಪರಿಶೀಲನೆ

ಮೈಸೂರು : 29 ರಂದು ಮಾನ್ಯ ಮುಖ್ಯಮಂತ್ರಿಗಳಿಂದ ಡಾ ವಿಷ್ಣು ವರ್ಧನ್ ಸ್ಮಾರಕ ಲೋಕಾರ್ಪಣೆ: ಜಿಲ್ಲಾಧಿಕಾರಿಗಳಿಂದ ಅಗತ್ಯ ಸಿದ್ದತೆಗಳ ಪರಿಶೀಲನೆ.

ಡಾ.ವಿಷ್ಣುವರ್ಧನ್‌ ಅವರ ಸ್ಮಾರಕ ಭವನ ಜನವರಿ 29 ರಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರಿಂದ ಉದ್ಘಾಟನೆಯಾಗುತ್ತಿರುವ ಹಿನ್ನೆಲ್ಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳಾದ ಡಾ ರಾಜೇಂದ್ರ ಅವರು ಸ್ಮಾರಕ ಸ್ಧಳಕ್ಕೆ ಭೇಟಿ ನೀಡಿ ಇಂದು ಅಗತ್ಯ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಮೈಸೂರು ತಾಲೂಕಿನ ಎಚ್‌.ಡಿ.ಕೋಟೆ ರಸ್ತೆಯ ಮಾರ್ಗದಲ್ಲಿ ಬರುವ ಹಾಲಾಳು ಗ್ರಾಮದ ಐದು ಎಕರೆ ಪ್ರದೇಶದಲ್ಲಿ ಡಾ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಿದ್ದು, ಕಾರ್ಯಕ್ರಮ ನಡೆಯುವ ಯಾವುದೇ ಲೋಪವಾಗದಂತೆ ಅಗತ್ಯ ಕ್ರಮವಹಿಸಬೇಕು ಹಾಗೂ ಕಾರ್ಯಕ್ರಮದ ಸಿದ್ದತೆಯನ್ನು ವ್ಯವಸ್ಧಿತವಾಗಿ ಮಾಡಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಬರುವ ವಾಹನಗಳ ಪಾರ್ಕಿಂಗ್ ವ್ಯವಸ್ಧೆ ಮಾಡುವಂತೆ ಹಾಗೂ ಸೂಕ್ತ ಸ್ಧಳದಲ್ಲಿ ಊಟದ ವ್ಯವಸ್ಧೆ ಮಾಡಲು ಅಗತ್ಯ ವ್ಯವಸ್ಧೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಅವರ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಡಾ ವಿಷ್ಣು ವರ್ಧನ್ ಸ್ಮಾರಕ ಪ್ರತಿಷ್ಠಾನದ ಕಾರ್ಯದರ್ಶಿ ವಿಜಯಾನಂದ್ ಹಾಗೂ ಅಧಿಕಾರಿಗಳು ಉಪಸ್ಧಿತರಿದ್ದರು.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *