ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ಮುರ್ಮು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 74 ನೇ ಗಣರಾಜ್ಯೋತ್ಸವದ ಮುನ್ನಾ ದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಮುರ್ಮು ಅವರ ಮೊದಲ ಗಣರಾಜ್ಯೋತ್ಸವ ಭಾಷಣವಾಗಿದೆ. ಇಂದು ಸಂಜೆ 7ಕ್ಕೆ ಅವರ ಭಾಷಣ ಎಲ್ಲಾ ಮಧ್ಯಮಗಳಲ್ಲಿ ನೇರ ಪ್ರಸಾರವಾಗಲಿದೆ. ದೂರದರ್ಶನದ ಎಲ್ಲಾ ಚಾನೆಲ್‌ಗಳಲ್ಲಿ ಹಿಂದಿಯಲ್ಲಿ ಪ್ರಸಾರವಾಗುತ್ತದೆ ಮತ್ತು ನಂತರ ಇಂಗ್ಲಿಷ್ ಆವೃತ್ತಿಯಲ್ಲಿ ಪ್ರಸಾರವಾಗುತ್ತದೆ. ಬಳಿಕ ದೂರದರ್ಶನದ ಪ್ರಾದೇಶಿಕ ಚಾನೆಲ್‌ಗಳು ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡುತ್ತವೆ.
ವರದಿ: ಸಿಂಚನ ಕೆ
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.