
ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಜನಮೂರ್ತಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಅಂಜನಮೂರ್ತಿ ಅವರು ಧರ್ಮಸಿಂಗ್ ಅವರ ಸಂಪುಟದಲ್ಲಿ ವಸತಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. ಜನಾನುರಾಗಿ ಆಗಿದ್ದರು. ಅವರ ನಿಧನದ ಸುದ್ದಿ ಕೇಳಿ ಬಹಳ ನೋವಾಗಿದೆ. ನೆಲಮಂಗಲ ಕ್ಷೇತ್ರದ ಅಭಿವದ್ಧಿಗೆ ಸಾಕಷ್ಟು ಶ್ರಮಿಸಿದ್ದರು. ಪಕ್ಷದ ಸಂಘಟನೆಯಲ್ಲಿ ಸಾಕಷ್ಟು ಶ್ರಮ ವಹಿಸಿದ್ದರು.

ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿ ಬಳಗಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ವರದಿ: ನಂದಿನಿ ಮೈಸೂರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655