
ಬೆಂಗಳೂರು: ”ಫಲಪುಷ್ಪ ಪ್ರದರ್ಶನ” ಉದ್ಘಾಟನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿಶೇಷ ಸಂದರ್ಭದಲ್ಲಿ ಕರ್ನಾಟಕ ರತ್ನ ಡಾ. ರಾಜ್‍ಕುಮಾರ್ ಮತ್ತು ಡಾ.ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ “ ಫಲಪುಷ್ಪ ಪ್ರದರ್ಶನ” ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ಹಾಗೂ ಇತರ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು. ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಿದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)
