ನವದೆಹಲಿ : 3 ವರ್ಷದ ಮಗುವಿನ ಮೇಲೆ ಗ್ಯಾಂಗ್ ರೇಪ್ – ಇಬ್ಬರ ಬಂಧನ.
3 ವರ್ಷದ ಮಗುವಿನ (3-Year-Old Girl) ಮೇಲೆ ಕೀಚಕರು ಗ್ಯಾಂಗ್ ರೇಪ್ (Gang-Rape) ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ (Delhi) ಫತೇಪುರ್ ಬೆರಿಯಲ್ಲಿ (Fatehpur Beri) ನಡೆದಿದೆ.
ಮನೆಯಲ್ಲಿ ಮಗು ಕಾಣದಿದ್ದಾಗ ಪೋಷಕರು ಅಕ್ಕಪಕ್ಕದ ಮನೆಯವರಲ್ಲಿ ವಿಚಾರಿಸಿದ್ದಾರೆ. ಈ ವೇಳೆ ಮಗು ಇಬ್ಬರು ಯುವಕರೊಂದಿಗೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಪೋಷಕರು ಸ್ಥಳಕ್ಕೆ ತೆರಳಿ ನೋಡಿದಾಗ ಮಗು ಅಳುತ್ತಾ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಕೂಡಲೇ ಮಗುವನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ವಿಚಾರಣೆ ನಡೆಸಿ ಶಕ್ತಿಮಾನ್ ಸಿಂಗ್ (22) ಮತ್ತು ರಾಮ್ನಿವಾಸ್ ಪಣಿಕಾ (27) ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಬ್ಬರಿಗೂ ಮದುವೆಯಾಗಿದ್ದು ಸ್ಥಳೀಯ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ವರದಿ: ನಂದಿನಿ ಮೈಸೂರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.