

ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಿ ಅವರ ಜನ್ಮದಿನದ ಅಂಗವಾಗಿ ಮೊದಲು ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ – ಶಾಸಕರಾದ ಗೋಪಾಲಕೃಷ್ಣ ಬೇಳೂರು
ಸಾಗರ-ಹೊಸನಗರ: ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ಬೆಂಗಳೂರಿನಲ್ಲಿ ಇಂದು 2023-24ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನಡೆದ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಸ್ವಚ್ಛ ಸರ್ವೇಕ್ಷಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಿ ಅವರ ಜನ್ಮದಿನದ ಅಂಗವಾಗಿ ಮೊದಲು ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು , ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ಸರ್ಕಾರದ ಮುಖ್ಯ ಸಚೇತಕ, ಎಐಸಿಸಿ ಸದಸ್ಯರೂ ಆದ ಸಲೀಂ ಅಹಮ್ಮದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ ಮತ್ತು ಬಿಟಿ) ಸಚಿವರಾದ ಪ್ರಿಯಾಂಕಾ ಖರ್ಗೆ, ಶಾಸಕರಾದ ವಿನಯ್ ಕುಲಕರ್ಣಿ, ಹಾಗೂ ಚಿತ್ರ ನಟ ಸಾಧು ಕೋಕಿಲ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.