RRR’ ಚಿತ್ರದ ‘ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್ 2023ರ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿ.
ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಕಳೆದ ವರ್ಷ 2022ರಲ್ಲಿ ತೆರೆಕಂಡ ಆರ್ ಆರ್ ಆರ್ ಚಿತ್ರದ ‘ನಾಟು ನಾಟು’ ಹಾಡು 2023ರ ಗೋಲ್ಡನ್ ಗ್ಲೋಬ್ ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆದ್ದಿದೆ.
ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ತೆಲುಗು ಬ್ಲಾಕ್ ಬಸ್ಟರ್ ಆರ್ ಆರ್ ಆರ್ ಚಿತ್ರವು ‘ಅತ್ಯುತ್ತಮ ಇಂಗ್ಲೀಷೇತರ ಚಿತ್ರ’ ಎಂದು ನಾಮನಿರ್ದೇಶನಗೊಂಡಿದೆ.
ಚಿತ್ರದಲ್ಲಿ ತೆಲುಗು ಟ್ರ್ಯಾಕ್ “ನಾಟು ನಾಟು” ನ್ನು ಹಿರಿಯ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಯೋಜಿಸಿದ್ದು, ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಸಾಹಿತ್ಯ ಬರೆದಿದ್ದಾರೆ. ಸಮಾರಂಭದಲ್ಲಿ ಸಂಗೀತ ನಿರ್ದೇಶಕ ಕೀರವಾಣಿ ಟ್ರೋಫಿಯನ್ನು ಸ್ವೀಕರಿಸಿ ಸಂಭ್ರಮಿಸಿದರು.
ವರದಿ: ಸಿಂಚನ ಕೆ