
ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತ್ಯೋತ್ಸವ ಕಾರ್ಯಕ್ರಮ – ಶಾಸಕ ಗೋಪಾಲಕೃಷ್ಣ ಬೇಳೂರು
ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಾಯಿತು.

ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು, ಶ್ರೀ ರೇಣುಕಾ ಪೀಠ , ಶ್ರೀ ನಾರಾಯಣ ಗುರು ಸೋಲೂರು ಮಠದ ಶ್ರೀಶ್ರೀಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು, ಹಿಂದುಳಿದ ವರ್ಗಗಳ ಕಲ್ಯಾಣ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿಯವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು, ವಿಧಾನ ಪರಿಷತ್ ಸದಸ್ಯರಾದ ಹರೀಶ್ ರವರು, ಆರ್ಯ ಈಡಿಗ ಸಂಘದ ರಾಜ್ಯಾಧ್ಯಕ್ಷರಾದ ತಿಮ್ಮೇಗೌಡರು ಸೇರಿದಂತೆ ಸಮಾಜದ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.