
ಬೆಂಗಳೂರು : ಬ್ರಾಹ್ಮಣ ಸಿಎಂ ; 8 ಜನ ಉಪ ಮುಖ್ಯಮಂತ್ರಿಗಳು : ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ.!
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ ಆಗ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬ್ರಾಹ್ಮಣ ಮುಖ್ಯಮಂತ್ರಿ ಆಗ್ತಾರೆ. ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡಿ, 8 ಜನರನ್ನು ಉಪಮುಖ್ಯಮಂತ್ರಿ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ RSS ಮುಖಂಡರ ಸಭೆ ನಡೆದಿದ್ದು, ಸಭೆಯಲ್ಲಿ ಮುಂದಿನ ಸಿಎಂ ಬಗ್ಗೆ ನಿರ್ಧರಿಸಲಾಗಿದೆ. ಹೀಗಾಗಿ ಪ್ರಹ್ಲಾದ್ ಜೋಶಿ ಅವರೇ ಮುಂದಿನ ಮುಖ್ಯಮಂತ್ರಿ ಆಗ್ತಾರೆ. ಕರ್ನಾಟಕದ ಜನರು RSS, ಬಿಜೆಪಿ ಕಳ್ಳಾಟಕ್ಕೆ ಬಲಿಯಾಗಬೇಡಿ.
RSSನವರು ನಿರ್ಧಾರ ಮಾಡಿರುವ ಬ್ರಾಹ್ಮಣ ಸಿಎಂ ನಮ್ಮ ಹಳೇ ಕರ್ನಾಟಕದ ಬ್ರಾಹ್ಮಣರಲ್ಲ. ಮಹಾರಾಷ್ಟ್ರ ಭಾಗದ ಪೇಶ್ವೆಗಳು, ಶೃಂಗೇರಿ ಮಠ ಒಡೆದವರ ಭಾಗದ ಬ್ರಾಹ್ಮಣರ ಗುಂಪಿಗೆ ಸೇರಿದವರು ಎಂದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.