
ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳ.
ನಿರ್ವಹಣಾ ವ್ಯವಸ್ಥೆಗಳನ್ನು ಸುಧಾರಿಸುವಂತೆ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವರಿಂದ ಸೂಚನೆ. ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ದಿನೇ ದಿನೇ ಹೆಚ್ಚುತಿದ್ದು, ಕೋವಿಡ್ ನಿರ್ವಹಣಾ ವ್ಯವಸ್ಥೆಗಳನ್ನು ಸುಧಾರಿಸುವಂತೆ ರಾಜ್ಯಗಳಿಗೆ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಸೂಚನೆ ನೀಡಿದ್ದಾರೆ.
ರಾಜ್ಯಗಳಲ್ಲಿ ಲಸಿಕಾ ಕರಣವನ್ನು ತೀವ್ರಗೊಳಿಸಿ ಹಾಗೂ ಸೋಂಕಿನ ಜಿನೋಮ್ ಸೀಕ್ವೆನ್ಸಿಂಗ್ ನಡೆಸುವ ಪ್ರಮಾಣವನ್ನು ಹೆಚ್ಚಿಸುವಂತೆ ಸೂಚಿಸಲಾಗಿದೆ.

ಇದಲ್ಲದೆ ತೀವ್ರತರವಾದ ಉಸಿರಾಟ ಸಮಸ್ಯೆ ಎದುರಿಸುವ ವ್ಯಕ್ತಿಗಳ ಬಗ್ಗೆ ಗಮನ ಹರಿಸಿ ,ನಿರ್ವಹಣಾ ವ್ಯವಸ್ಥೆಯನ್ನು ಸುಧಾರಿಸಲು ಸೂಚನೆ ನೀಡಲಾಗಿದೆ. ದೇಶದಲ್ಲಿ ಕೋವಿಡ್ ಸೋಂಕಿನಲ್ಲಿ, ಮುಂದಿನ 15 ರಿಂದ 20 ದಿನಗಳಲ್ಲಿ ಹೆಚ್ಚಳ ಕಾಣುವ ಸಾಧ್ಯತೆ ಇದೆ. ಆದರೆ ನಾಲ್ಕನೇ ಅಲೆಯ ಭಯವಿಲ್ಲ .ಇದರ ಲಕ್ಷಣಗಳು ತೀರಾ ಸೌಮ್ಯವಾಗಿವೆ ಜನರು ಮುನ್ನೆಚ್ಚರಿಕ ಕ್ರಮಗಳನ್ನು ಅನುಸರಿಸಿದರೆ ಸಾಕು ಎಂದು ತಜ್ಞರು ತಿಳಿಸಿದ್ದಾರೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.