ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ – ಡಿ.ಕೆ.ಶಿವಕುಮಾರ್

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ – ಡಿ.ಕೆ.ಶಿವಕುಮಾರ್

ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಅದೇಶಿಸಿರುವ ಹಿನ್ನೆಲೆಯಲ್ಲಿ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ ನಡೆಸಿದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕರೆದಿದ್ದ ಸಭೆಯಲ್ಲಿ ನ್ಯಾಯಮೂರ್ತಿಗಳಾದ ಎಂ ಎನ್ ವೆಂಕಟಾಚಲಯ್ಯ, ಶಿವರಾಜ ಪಾಟೀಲ್, ವಿ ಗೋಪಾಲಗೌಡ, ಆರ್ ವಿ ರವೀಂದ್ರನ್, ಪಿ. ವಿಶ್ವನಾಥಶೆಟ್ಟಿ, ಎ ಎನ್ ವೇಣುಗೋಪಾಲಗೌಡ, ಕಾನೂನು ಸಚಿವರಾದ ಸಚಿವ ಎಚ್ ಕೆ ಪಾಟೀಲ್, ಸಿಎಂ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ರಾಜಕೀಯ ಸಲಹೆಗಾರರಾದ ನಸೀರ್ ಅಹ್ಮದ್, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮಾಜಿ ಅಡ್ವೋಕೇಟ್ ಜನರಲ್ ಗಳಾದ ಬಿ ವಿ ಆಚಾರ್ಯ, ಮಧುಸೂದನ್ ನಾಯಕ್, ವಿಜಯಶಂಕರ್, ಉದಯ್ ಹೊಳ್ಳ, ಪ್ರೊ ರವಿವರ್ಮಕುಮಾರ್, ಪ್ರಭುಲಿಂಗ ನಾವದಗಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *