
ಬೆಂಗಳೂರು: ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ
ಹಿರಿಯ ಪತ್ರಕರ್ತ, ಕನ್ನಡ ಪ್ರಭ ಪತ್ರಿಕೆಯ ಮಾಜಿ ಸಂಪಾದಕರಾದ ಕೆ.ಸತ್ಯನಾರಾಯಣ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
‘ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಅವರ ಅಗಲಿಕೆಯಿಂದ ಪತ್ರಿಕೋದ್ಯಮದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಸತ್ಯನಾರಾಯಣ ಅವರು ತಮ್ಮ ಅಂಕಣಗಳಲ್ಲಿ ಸಮಕಾಲಿನ ರಾಜಕೀಯ ಸೇರಿದಂತೆ ಹಲವು ವಿಷಯಗಳ ಮೇಲೆ ಬೆಳಕು ಚೆಲ್ಲುತ್ತಿದ್ದರು.
ಸತ್ಯನಾರಾಯಣ ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳನ್ನು ಸೂಚಿಸುತ್ತಾ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಸಂತಾಪ ನುಡಿಯಲ್ಲಿ ಶಿವಕುಮಾರ್ ಅವರು ತಿಳಿಸಿದ್ದಾರೆ.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.