ಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇಂದು (ಮಾರ್ಚ್ 29) ದಿನಾಂಕ ಪ್ರಕಟವಾಗಲಿದೆ. ಇದರಿಂದ ಇಂದಿನಿಂದಲೇ ನೀತಿ ಸಂಹಿತೆ(Code Of conduct) ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೂ ರದ್ದು ಮಾಡಿದ್ದಾರೆ. ಇಂದೇ (ಮಾರ್ಚ್‌ 29, 2023) ರಂದೇ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟ ಆಗಲಿದೆ.

ಚುನಾವಣಾ ಆಯೋಗ ಇಂದು ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಲಿದೆ. ನೀತಿ ಸಂಹಿತೆ ಸಹ ಇಂದಿನಿಂದಲೇ ಜಾರಿಯಾಗಲಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಹೀಗಾಗಿ ಬೊಮ್ಮಾಯಿ ತಮ್ಮ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. 2018 ರ ವಿಧಾನಸಭಾ ಚುನಾವಣೆಯು ಮೇ 12, 2018 ರಂದು ನಡೆದಿತ್ತು. ಮತ್ತು ಪ್ರಸ್ತುತ ವಿಧಾನಸಭೆಯ ಅವಧಿಯು ಮೇ 24, 2023 ರಂದು ಮುಕ್ತಾಯಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ. ವೇಳಾಪಟ್ಟಿ ಪ್ರಕಟವಾದ ನಂತರ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಇಂದಿನಿಂದಲೇ ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದರೆ ಸಿಎಂ ಸೇರಿದಂತೆ ಸಚಿವರು ಸರ್ಕಾರಿ ಸೌಲಭ್ಯವನ್ನು ಬಳಸುವಂತಿಲ್ಲ. ಹಾಗೂ ಸರ್ಕಾರ ಯಾವುದೇ ಹೊಸ ಯೋಜನೆ ಘೋಷಣೆ ಮಾಡುವಂತಿಲ್ಲ. ಆದ್ರೆ ಸಿಎಂ ಸೇರಿ ಸಚಿವರು, ಶಾಸಕರಿಗೆ ಎಂದಿನಂತೆ ಭದ್ರತೆ ಇರುತ್ತೆ. ಎಸ್ಕಾರ್ಟ್​​​ ಸೇರಿದಂತೆ ಎಲ್ಲಾ ರೀತಿಯ ಭದ್ರತೆ ಮುಂದುವರಿಯಲಿದೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655.

Leave a Reply

Your email address will not be published. Required fields are marked *