ಕರ್ನಾಟಕ ಚುನಾವಣೆ: ಬಿಜೆಪಿ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಯಾಗಿ ಅಣ್ಣಮಲೈ.
ಕರ್ನಾಟಕ ವಿಧಾನ ಚುನಾವಣೆಗೆ ರಾಜಕೀಯ ಪಕ್ಷಗಳು ಭರದ ಸಿದ್ಧತೆಯನ್ನು ಆರಂಭಿಸಿವೆ. ಅದರಲ್ಲೂ ಬಿಜೆಪಿ ಕ್ಷಿಪ್ರ ವೇಗದಲ್ಲಿ ಚುನಾವಣಾ ಪ್ರಚಾರಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಸಂಘಟನಾ ಉಸ್ತುವಾರಿಗಳು ಯಾರು ಎಂಬುದನ್ನು ಇಂದು ಅದು ಪ್ರಕಟಿಸಿದೆ.
ಕರ್ನಾಟಕ ರಾಜ್ಯಕ್ಕೆ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಚುನಾವಣಾ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಅಣ್ಣಾಮಲೈ ಅವರನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನೇಮಕ ಮಾಡಿದ್ದಾರೆ.
ವರದಿ: ಸಿಂಚನ ಕೆ
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.