ಕಾರವಾರ: ಅಂತ್ಯಕ್ರಿಯೆಗೆ ಹೋಗುತ್ತಿದ್ದವರ ಮೇಲೆ ಕಾರು ಹರಿದು ಮೂವರು ಮಹಿಳೆಯರು ಮೃತ್ಯು.
ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪ್ರವಾಸಿಗರ ಕಾರು ಡಿಕ್ಕಿಯಾಗಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜೋಯಿಡಾದ ರಾಮನಗರ ಸಮೀಪ ಹುಬ್ಬಳ್ಳಿ-ಗೋವಾ ಹೆದ್ದಾರಿಯ ಸೀತಾವಾಡದಲ್ಲಿ ಸಂಭವಿಸಿದೆ.
ಖಾನಾಪುರದ ಘಾರ್ಲಿ ಮೂಲದ ಪಾರ್ವತಿ ಗಾವಡಾ, ದುರ್ಗೆ ಕೋಲ್ಸೇಕರ ಹಾಗೂ ತುಳಸಿ ಗಾವಡಾ ಮೃತಪಟ್ಟ ಮಹಿಳೆಯರಾಗಿದ್ದಾರೆ.
ಅಪಘಾತದಲ್ಲಿ ರಾಮನಗರದ ವಿಪಿನ್ ತಾಳ್ವೆ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಮಾಡಿ ಚಿಕಿತ್ಸೆ ನೀಡಲಾಗಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮೂವರು ಮಹಿಳೆಯರು ರಸ್ತೆ ಪಕ್ಕ ನಡೆದು ಹೋಗುತ್ತಿದ್ದರು. ಇದೇ ವೇಳೆ, ಪ್ರವಾಸಕ್ಕೆಂದು ಗೋವಾಗೆ ತೆರಳುತ್ತಿದ್ದ ತಮಿಳುನಾಡು ನೋಂದಣಿಯ ಕಾರು ಹರಿದು ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ನಿರ್ಲಕ್ಷ್ಯದ ಚಾಲನೆಯೇ ಘಟನೆಗೆ ಕಾರಣವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.