ಕೂಲಿ ಕಾರ್ಮಿಕರ ಆರೋಗ್ಯ ಸುಧಾರಣೆ ದೃಷ್ಟಿಯಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು.
ಹುಣಸೂರು: ಕೂಲಿ ಕಾರ್ಮಿಕರ ಆರೋಗ್ಯ ಸುಧಾರಣೆ ದೃಷ್ಟಿಯಿಂದ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ‘ಗ್ರಾಮ ಆರೋಗ್ಯ’ ಶೀರ್ಷಿಕೆಯಡಿ ಒಂದು ತಿಂಗಳ ಅಭಿಯಾನದಡಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಗ್ರಾಮ ವ್ಯಾಪ್ತಿಯಲ್ಲಿ ನಡೆಯಲಿರು ಲವ ಆರೋಗ್ಯ ತಪಾಸಣೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮನು ಬಿ.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಕೆ.ಹೆಚ್.ಪಿ.ಟಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 'ಗ್ರಾಮ ಆರೋಗ್ಯ' ನಿಮ್ಮ ಆರೋಗ್ಯವೇ ಗ್ರಾಮದ ಆರೋಗ್ಯ ಅಭಿಯಾನದ ಅಂಗವಾಗಿ ಸ್ಥಳೀಯ ನರೇಗಾ ಕೂಲಿ ಕಾರ್ಮಿಕರು ಹಾಗೂ ಗ್ರಾಮಸ್ಥರಿಗಾಗಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.
ಈಗಾಗಲೇ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 4500 ಕ್ಕೂ ಹೆಚ್ಚಿನ ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ 41 ಗ್ರಾಮ ಪಂಚಾಯಿತಿಗಳಲ್ಲಿರುವ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗಾಗಿ ಕೂಲಿ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಆರೋಗ್ಯ ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಹಿಮೋಗ್ಲೋಬಿನ್ ಹಾಗೂ ಸಂಬಂಧಿಸಿದ ಸಮುದಾಯ ಆರೋಗ್ಯಾಧಿಕಾರಿಗಳಿಂದ ಹೆಚ್ಚಿನ ಚಿಕಿತ್ಸೆಗೆ ಶಿಫಾರಸ್ಸು ಸಹ ಮಾಡಲಾಗುತ್ತಿದೆ.
ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.