ಬೆಂಗಳೂರು: ಹೈಕಮಾಂಡ್‌ನ ಸೂಚನೆಯಂತೆ ಕೋಲಾರದಲ್ಲಿ ಸ್ಪರ್ಧಿಸುವುದನ್ನು ಕೈಬಿಟ್ಟಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ನ ಅಭ್ಯರ್ಥಿಗಳ ಮೊದಲ ಲಿಸ್ಟ್ ಬಿಡುಗಡೆ ಆಗಿದ್ದು ಸಿದ್ದರಾಮಯ್ಯಗೆ. ವರುಣಾದಿಂದಲೇ ಟಿಕೆಟ್ ಅನೌನ್ಸ್ ಆಗಿದೆ. ಆದ್ರೆ, ಸಿದ್ದರಾಮಯ್ಯ ಈ ಬಾರಿಯೂ ಸಹ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮಾತುಗಳನ್ನಾಡುತ್ತಿದ್ದು, ಈಗಾಗಲೇ ಫಿಕ್ಸ್ ಆಗಿರುವ ವರುಣಾ ಕ್ಷೇತ್ರ ಅಲ್ಲದೆ ಸಿದ್ದರಾಮಯ್ಯ ಸ್ಪರ್ಧಿಸುವ ಎರಡನೇ ಕ್ಷೇತ್ರ ಯಾವುದು ಎನ್ನುವುದು ಮಾತ್ರ ತೀವ್ರ ಕುತೂಹಲ ಮೂಡಿಸಿದೆ. ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಹಾಗೂ ಬಾದಾಮಿಯಿಂದ ಸ್ಪರ್ಧೆ ಮಾಡಿದ್ದರು. ಆದ್ರೆ, ಚಾಮುಂಡೇಶ್ವರಿಯಲ್ಲಿ ಸೋಲು ಕಂಡಿದ್ದರೆ, ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದರು.
ಈ ಬಾರಿಯೂ ಸಹ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹೈಕಮಾಂಡ್ ಕೋಲಾರ ಬೇಡ ವರುಣಾದಲ್ಲಿ ಸ್ಪರ್ಧಿಸಿ ಎಂದು ಹೇಳಿತ್ತು. ಈ ಸಮಯದಲ್ಲಿ ಕೋಲಾರ ಕ್ಷೇತ್ರದಿಂದ ಹಿಂದೆ ಸರಿದರೆ ಕಾಂಗ್ರೆಸ್‌ಗೆ ಹಿನ್ನಡೆಯಾಗುತ್ತದೆ ಎಂದು ನಾಯಕರು ಹೇಳಿದ್ದಾರೆ. ಇವತ್ತಿನ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಕೋಲಾರ ಬಿಡುವಂತಿಲ್ಲ. ಹೈಕಮಾಂಡ್ ಸೂಚನೆಯಂತೆ ವರುಣಾ ಕ್ಷೇತ್ರ ಬಿಡಲೂ ಆಗಲ್ಲ. ಹೀಗಾಗಿ ಸಿದ್ದರಾಮಯ್ಯ ಅವರು ಕೋಲಾರ–ವರುಣಾ ಎರಡೂ ಕ್ಷೇತ್ರಗಳಲ್ಲೂ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655.