ಮಡಿಕೇರಿ: ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆ.
ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಸರ್ಕಾರದಿಂದ ಸನುದಾನ ಬಿಡುಗಡೆಯಾಗಲಿದ್ದು, ಸಂಪ್ರದಾಯದಂತೆ ದಸರಾ ಅಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ. ಸಿ ನಾಗೇಶ್ ಸಲಹೆ ನೀಡಿದ್ದರೆ.
ನಗರದ ಜಿ.ಪಂ. ಸಭಾಂಗಣದಲ್ಲಿ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಈ ಹಿಂದಿನಂತೆ ದಸರಾ ಆಚರಿಸುವಂತಾಗಬೇಕು .
ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು, ವಿವಿಧ ಉಪಸಮಿತಿಗಳು ಸೇರಿದಂತೆ ಕಾಲಕಾಲಕ್ಕೆ ಸಭೆ ಆಯೋಜಿಸಿ, ದಸರಾ ಯಶಸ್ಸಿಗೆ ಶ್ರಮಿಸುವಂತೆ ಸಚಿವರು ಸಲಹೆ ಮಾಡಿದರು.
ವರದಿ : ಸಿಂಚನಾ ಜಯಂತ ಬಲೇಗರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.