“ಕುಮಾರಿ ದಿವ್ಯಾ ಎಂಬ ಬಾಲಕಿಯನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ,ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ”

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದ ಕುಮಾರಿ ದಿವ್ಯಾ ಎಂಬ 10 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ.


ಇಂತಹ ಹೇಯ ಕೃತ್ಯವನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಯಿತು.

ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು.

ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ಸಂಶೋಧಕರೆಲ್ಲ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನಮಗೆಲ್ಲರಿಗೂ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಕರುಣಿಸಲಿ ಎಂದು ಪ್ರತಿಭಟನಾಕಾರರು ಪ್ರಾರ್ಥಿಸಿದರು.

ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಮಹೇಶ್ ಸೋಸ್ಲೆ,ಅಧ್ಯಕ್ಷರಾದ ನಟರಾಜ್ ಶಿವಣ್ಣ ,ಉಪಾಧ್ಯಕ್ಷರಾದ ರಾಜೇಶ್ ,ಸಂಶೋಧನಾ ವಿದ್ಯಾರ್ಥಿಗಳಾದ ಪಾರ್ಥ,ರಾಘವೇಂದ್ರ ,ನಂಜುಂಡಸ್ವಾಮಿ, ಪ್ರವೀಣ್,ರಂಗನಾಥ್,ನಾಗಮಲ್ಲು,ಮುತ್ತುರಾಜ್,ವೆಂಕಟೇಶ್ ಮುಂತಾದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *