ಮಂಡ್ಯ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಶಾಖೆ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ಮಂಡ್ಯದ ಕಲಾಮಂದಿರದಲ್ಲಿ 2ನೇ ದಿನವು ಮುಂದುವರೆಯಿತು.
ತಮಟೆ ಕಲಾವಿದ ಕುಂತೂರು ಕುಮಾರ್ ರವರು ತಮಟೆ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಚಲನಚಿತ್ರ ನಟರು ಹಾಗೂ ರಂಗಭೂಮಿ ನಿರ್ದೇಶಕರಾದ ಮಂಡ್ಯ ರಮೇಶ್ ಮಾತನಾಡಿ, ಕನ್ನಡತನವನ್ನು ನಮ್ಮ ನೆಲೆಯನ್ನು ಈ ಮಣ್ಣಿನ ಗುಣವನ್ನು ಪ್ರತಿಯೊಬ್ಬರೂ ಪ್ರೀತಿಸಬೇಕು ಎಂದರು.
ಗಿಚ್ಚಿ-ಗಿಲಿಗಿಲಿ ಕಲಾವಿದರಾದ ಚಂದ್ರಪ್ರಭಾ ಮಾತನಾಡಿ, 67ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ ಎಂದರು.
ಇದೇ ಸಂದರ್ಭದಲ್ಲಿ ಗಣ್ಯರು ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರವಿಕುಮಾರ ಚಾಮಲಾಪುರ, ಕೃಷ್ಣಗೌಡ ಹುಸ್ಕೂರು, ಅಪ್ಪಾಜಪ್ಪ, ಸುಜಾತಕೃಷ್ಣ, ಶಿವಲಿಂಗೇಗೌಡ, ಮುತ್ತೇಗೆರೆ ಮಂಜು, ಸೇರಿದಂತೆ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಹಾಜರಿದ್ದರು.
ವರದಿ: ನಂದಿನಿ ಮೈಸೂರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.