ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಲಂಡನ್ ನಲ್ಲಿ ಜೀವಮಾನ ಸಾಧನೆ ಗೌರವ

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಲಂಡನ್ ನಲ್ಲಿ ಜೀವಮಾನ ಸಾಧನೆ ಗೌರವ.

ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಇತ್ತೀಚಿಗೆ ಲಂಡನ್ ನಲ್ಲಿ ಜೀವಮಾನ ಸಾಧನೆ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ.

ಕಳೆದ ವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿ ಘೋಷಿಸಲಾಗಿದ್ದು, ತದ ನಂತರ ರಾಷ್ಟ್ರೀಯ ಭಾರತೀಯ ವಿದ್ಯಾರ್ಥಿಗಳು ಮತ್ತು ಯುಕೆ ಹಳೆಯ ವಿದ್ಯಾರ್ಥಿಗಳ ಒಕ್ಕೂಟದಿಂದ ನವ ದೆಹಲಿಯಲ್ಲಿ ಡಾ ಸಿಂಗ್ ಅವರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಲಾಗಿದೆ.
ಭಾರತದಲ್ಲಿನ ಬ್ರಿಟಿಷ್ ಕೌನ್ಸಿಲ್ ಸಹಭಾಗಿತ್ವದಲ್ಲಿ ಬ್ರಿಟಿಷ್ ಯುನಿವರ್ಸಿಟಿಯಲ್ಲಿ ವ್ಯಾಸಂಗ ಮಾಡಿದ ಭಾರತೀಯ ವಿದ್ಯಾರ್ಥಿಗಳ ಸಾಧನೆಯನ್ನು ಪರಿಗಣಿಸಿ ಭಾರತ- ಯುಕೆಯಲ್ಲಿರುವ ಸಾಧಕರನ್ನು ಲಂಡನ್ ನ ಎನ್ ಐಎಸ್ ಎಯು ನಿಂದ ಗೌರವಿಸಲಾಗುತ್ತದೆ. ಆಕ್ಸ್ ಫರ್ಡ್ ಮತ್ತು ಕೆಂಬ್ರಿಡ್ಜ್ ವಿವಿಯಲ್ಲಿನ ಶೈಕಣಿಕ ಸಾಧನೆಗಾಗಿ ಡಾ. ಸಿಂಗ್ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.
ಈ ಪ್ರಶಸ್ತಿಯಿಂದ ಸಂತೋಷವಾಗಿದೆ. ನಮ್ಮ ದೇಶದಿಂದ ಮುಂದೆ ಬರುವ ಯುವ ಜನಾಂಗ ಮತ್ತು ಉಭಯ ರಾಷ್ಟ್ರಗಳ ನಡುವಣ ಸಂಬಂಧವನ್ನು ಅರ್ಥಪೂರ್ಣವಾಗಿಸಿದೆ ಎಂದು ಡಾ. ಸಿಂಗ್ ತಿಳಿಸಿದ್ದಾರೆ. ಯುಕೆಯಲ್ಲಿ ಅಧ್ಯಯನ ಮಾಡಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಜವಹರ ಲಾಲ್ ನೆಹರೂ, ಡಾ. ಬಿ.ಆರ್. ಅಂಬೇಡ್ಕರ್, ಸರ್ದರ್ ವಲ್ಲಭಬಾಯಿ ಪಟೇಲ್ ಸೇರಿದಂತೆ ಅನೇಕ ಮಂದಿ ಅತ್ಯುತ್ತಮ ನಾಯಕರಾಗಿ ದೇಶ ಹಾಗೂ ವಿದೇಶಗಳಲ್ಲಿ ಪ್ರೇರಕರಾಗಿದ್ದಾರೆ.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *