
ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬೀದರ್, ಜುಲೈ 27 ಬೀದರ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ವಿದ್ಯಾರ್ಥ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ., ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1.00 ಲಕ್ಷ ರೂ. ಮಿತಿ ಇರುತ್ತದೆ. ಪ್ರಯುಕ್ತ ಆನ್‌ಲೈನ್ ವೆಬ್‌ಸೈಟ್ https://shop.karnataka.gov.in ನ್ನು ಸಂಪರ್ಕಿಸಿ ಆಗಸ್ಟ್ 16 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ನ್ನು ನೋಡಬಹುದಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಗೆ ಇಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಹಾಗೂ ಸಹಾಯವಾಣಿ ಸಂಖ್ಯೆ: 8050770005 ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116
Website :www.shivamotors.net