
ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ – ಸಿಇಒ
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಮೈಸೂರು ಇವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲೆಯ ಕುಡಿಯವ ನೀರಿನ ಪರಿಸ್ಧಿತಿಯ ಕುರಿತು ಮಾರ್ಚ 3 ರಂದು ಸಭೆ ನಡೆಸಲಾಯಿತು.
ಮೈಸೂರು ಜಿಲ್ಲೆಯಲ್ಲಿ ಒಟ್ಟು 105 ಹಳ್ಳಿಗಳಲ್ಲಿ ಮುಂದಿನ 2 ತಿಂಗಳುಗಳಲ್ಲಿ ಕುಡಿಯವ ನೀರಿನ ತೊಂದರೆ ಉಂಟಾಗಬಹುದು ಎಂದು ಅಂದಾಜಿಸಿದ್ದು, 7 ಹಳ್ಳಿಗಳಲ್ಲಿ ಖಾಸಗಿ ಕೊಳವ ಬಾವಿಗಳ ಮುಖಾಂತರ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪಿ.ಡಿ.ಓ ಮತ್ತು ನೀರುಗಂಟಿಗಳೊಂದಿಗೆ ಜಂಟಿಯಾಗಿ ಸಭೆಯನ್ನು ನಡೆಸಿ ಕುಡಿಯವ ನೀರಿನ ತೊಂದರೆ ಉಂಟಾಗದಂತೆ ಕ್ರಮವಹಿಸಲು ಸೂಚಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಲಿ ಇದ್ದತಂಹ ಕುಡಿಯುವ ನೀರು ಜಲಮೂಲಗಳನನ್ನು FTK ಮುಖಾಂತರ ಪರೀಕ್ಷೆಗಳನ್ನು ನಡೆಸಿ ವರದಿಗಳನ್ವಯ ಸೂಕ್ತ ಕ್ರಮಕೈಗೊಳ್ಳಲು ತಿಳಿಸಿದರು. ಹಾಗೂ ಕುಡಿಯುವ ನೀರಿನ ಮಾದರಿಗಳಲ್ಲಿ ಆರ್ಸೆನಿಕ್, ಪ್ಲೋರೈಡ್ ಮತ್ತು ನೈಟ್ರೇಟ್ ಅಂಶವು ಕಂಡುಬಂದಲ್ಲಿ ಅಂತಹ ಕೊಳವೆ ಬಾವಿಗಳನ್ನು ಮುಚ್ಚಲು ಮತ್ತು ಕುಡಿಯುವ ನೀರಿಗಾಗಿ ಪರ್ಯಾಯ ಮಾರ್ಗ ಕಂಡುಕೊಂಡು ಸಮರ್ಪಕ ಕುಡಿಯುವ ಸರಬರಾಜು ಮಾಡಲು ತಿಳಿಸಿದರು.
ಗ್ರಾಮ ಪಂಚಾಯಿತಿಗಳಲಿ ಕೊಳವೆ ಬಾವಿಗಳ ಸಮೀಕ್ಷೆಯನ್ನು ಕೈಗೊಂಡು ಕಲುಷಿತಗೊಂಡಿರುವಂತಹ ಕೊಳವೆ ಬಾವಿಗಳನ್ನು ಮುಚ್ಚುವುದು, ಕಡಿಮೆ ಇಳುವರಿ ಅಥವಾ ಬತ್ತಿ ಹೋದಂತ ಕೊಳವೆ ಬಾವಿಗಳನ್ನು ಗುರುತಿಸಿ ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳ ಕಛೇರಿಯಿಂದ ನಿಗಧಿಪಡಿಸಲಾಗಿರುವ ದರಗಳನ್ನು ಆಧರಿಸಿ ಟ್ಯಾಂಕರ್ ವಾಟರ್ ಸಪ್ಲೈ ಆಪ್ ಮುಖಾಂತರ ಅವಶ್ಯಕತೆಗನುಗುಣವಾಗಿ ಟ್ಯಾಂಕರ್ ನೀರು ಸರಬರಾಜು ಮಾಡಲು ನಿಯಮಾನುಸಾರ ಕ್ರಮ ವಹಿಸಲು ಸೂಚಿಸಿದರು.
ಅಂತಿಮವಾಗಿ ಅನುಷ್ಠಾನ ಬೆಂಬಲ ಸಂಸ್ಥೆ ಮತ್ತು ಇತರೆ ಇಲಾಖೆ ವತಿಯಿಂದ ಲಭ್ಯವಿರುವ ಎನ್ ಜಿ ಓ ಗಳನ್ನು ಬಳಸಿಕೊಂಡು ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರು ಸದ್ಬಳಕೆ, ಕಾರ್ಯ ಮತ್ತು ನಿರ್ವಹಣೆ ಕುರಿತಾಗಿ ಜನರಲ್ಲಿ ಪರಿಣಾಮಕಾರಿಯಾಗಿ ಜಾಗೃತಿ ಮುಡಿಸಲು ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸೂಚಿಸಿ, ಸಭೆಯಲ್ಲಿ ನೀಡಿರುವ ಸೂಚನೆ ಮತ್ತು ನಿರ್ದೇಶನಗಳನ್ನು ಎಲ್ಲಾ ಅಧಿಕಾರಗಳು ಚಾಚು ತಪ್ಪದೇ ಪಾಲಿಸಲು ಸೂಚಿಸಲಾಯಿತು. ಕಾರ್ಯಪಾಲಕ ಅಭಿಯಂತರರ ವಂದನಾರ್ಪಣೆಯೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು. ಸಭೆಯಲ್ಲಿ ಗ್ರಾಮೀಣ ಕುಡಿಯವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು ರಂಜಿತ್ ಕುಮಾರ್, ಉಪ ಕಾರ್ಯದರ್ಶಿ ಜಗನ್ನಾಥ ಮೂರ್ತಿ, ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಹಾಜರಿದ್ದರು.
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555