ಮಾದರಿ ಕ್ಷೇತ್ರಕ್ಕೆ ಬುನಾದಿ ಹಾಕೋಣ : ರಾಮದಾಸ್.

ಮೈಸೂರು: ಮಾದರಿ ಕ್ಷೇತ್ರಕ್ಕೆ ಬುನಾದಿ ಹಾಕೋಣ : ರಾಮದಾಸ್.

ಭಾರತದಲ್ಲಿಯೇ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಬುನಾದಿ ಹಾಕೋಣ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು. ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ 54ರ ಕನಕಗಿರಿಯಲ್ಲಿ ಆಯೋಜಿಸಲಾಗಿದ್ದ ಯೋಗಕ್ಷೇಮಯಾತ್ರೆ ವೇಳೆ ಅವರು ಮಾತನಾಡಿದರು.
ಇಡೀ ದೇಶ ಇಂದು ಕೃಷ್ಣರಾಜ ಕ್ಷೇತ್ರದತ್ತ ತಿರುಗಿ ನೋಡುತ್ತಿದೆ. ಅಂತಹ ಯೋಜನೆಗಳು ಕ್ಷೇತ್ರದಲ್ಲಿ ಜಾರಿಯಾಗಿವೆ. ಅದಕ್ಕಾಗಿ ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಂಬಿದ ಸಭೆಯಲ್ಲಿ ಬೆನ್ನುತಟ್ಟಿ ಪ್ರೋತ್ಸಾಹಿಸಿರುವುದು ಸಾಕ್ಷಿಯಾಗಿದೆ ಎಂದರು. ಅಭಿವೃದ್ಧಿ ವಿಚಾರದಲ್ಲಿ ಇಂದು ಕೆ.ಆರ್.ಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ.‌ ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸಾರ್ವಜನಿಕವಾಗಿ ಹೇಳಿದ್ದಾರೆ. ಈ ಮಾಹಿತಿ ತಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುಂಬಿದ ಸಮಾವೇಶದಲ್ಲಿ ಬೆನ್ನು ತಟ್ಟಿ ಆಶೀರ್ವದಿಸಿದ್ದಾರೆ. ಈ ಎಲ್ಲಾ ಫಲ‌ ಕ್ಷೇತ್ರದ ಜನರಿಗೆ ಸಲ್ಲಲಿದೆ ಎಂದ ಅವರು ಏಪ್ರಿಲ್ ತಿಂಗಳಲ್ಲಿ ನಾನು ಹಾಗೂ ನಮ್ಮ ಕಾರ್ಯಕರ್ತರು ಕ್ಷೇತ್ರದ ಪ್ರತಿ ಮನೆ ಬಾಗಿಲಿಗೆ ಬರಲಿದ್ದೇವೆ, ನಿಮ್ಮ ಆಶೀರ್ವಾದ ನನಗೆ ಬೇಕಿದೆ. ಭ್ರಷ್ಟಾಚಾರ ರಹಿತ ಕ್ಷೇತ್ರ ಮಾಡುವ ಸಲುವಾಗಿ ದೇವರ ಮುಂದಿಟ್ಟ ಹತ್ತು ರೂ. ನೀಡಿ ಆಶೀರ್ವದಿಸಿ ಎಂದು ಮನವಿ ಮಾಡಿದರು.

ಭಾರತೀಯ ಜನತಾ ಪಕ್ಷ ಅಭಿವೃದ್ಧಿಯ ಮಂತ್ರ ಪಠಿಸುತ್ತದೆಯೇ ಹೊರತು, ಅನ್ಯ ವಿಚಾರಗಳತ್ತ ಗಮನ ಹರಿಸುವುದಿಲ್ಲ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಸಾಬೀತು ಮಾಡಿದ್ದಾರೆ. ಆ ದಿಕ್ಕಿನಲ್ಲಿ‌ ನಮ್ಮೆಲ್ಲರ ಚಿತ್ತ ಇರಬೇಕು ಎಂದು ತಿಳಿಸಿದರು. ಕ್ಷೇತ್ರ ವ್ಯಾಪ್ತಿಯ ೪೮೨ ಕಿಮೀ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಶೇ.೯೦ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ತಿಂಗಳ ಅಂತ್ಯದ ವೇಳೆಗೆ ಎಲ್ಲಾ ಕಾಮಗಾರಿ ಮುಗಿಯಲಿದೆ. ಮಾತ್ರವಲ್ಲ ಮುಂದಿನ ಹತ್ತು ವರ್ಷಗಳ ಕಾಲ ಕ್ಷೇತ್ರದಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡುಬಾರದ ರೀತಿಯಲ್ಲಿ ದೂರದೃಷ್ಟಿಯ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ ಎಂದರು. ಜಾತಿ, ಧರ್ಮ ಮೀರಿ ಈ ಕ್ಷೇತ್ರದ ಜನ ನನನ್ನು ಮನೆ ಮಗನಂತೆ ಕಂಡಿದ್ದಾರೆ, ಆಶೀರ್ವದಿಸಿದ್ದಾರೆ. ಅದರಂತೆಯೇ ನಾನು ಶಾಸಕನಾಗಿದ್ದ ಅಷ್ಟೂ ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ ಎಂದ ಅವರು, ಕಳೆದ ಐದು ವರ್ಷಗಳಲ್ಲಿ ನಡೆಯುತ್ತಿರುವ ಐದನೇ ಯೋಗಕ್ಷೇಮ ಯಾತ್ರೆ ಇದಾಗಿದೆ. ಜನರ ಕಷ್ಟಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಬೋರ್ವೆಲ್ ಮುಕ್ತ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಯಶಸ್ಸು ಸಾಧಿಸಿದ್ದೇವೆ. ಮಳೆಗಾಲದಲ್ಲಿ ವಾರ್ಡಿನ‌ ಹಲವೆಡೆ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಇದೀಗ ಆ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಹತ್ತು ಹಲವು ಯೋಜನೆಗಳನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗಿದೆ. ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿಸಿದರು. ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಹಲವು ಹತ್ತು ಜನಪರ ಕಾರ್ಯಕ್ರಮ ರೂಪಿಸಿವೆ. ಒಂದಲ್ಲಾ ಒಂದು ಯೋಜನೆಗಳ ಪ್ರಯೋಜನ ಕ್ಷೇತ್ರದ ಒಟ್ಟು ೮೦ ಸಾವಿರ ಕುಟುಂಬಗಳ ಪೈಕಿ ೭೦ ಸಾವಿರ ಕುಟುಂಬಕ್ಕೆ ಲಭಿಸಿದೆ. ಇಂತಹ ಹೊತ್ತಿನಲ್ಲಿ ಮತ್ತಷ್ಟು, ಮಗದಷ್ಟು ಯೋಜನೆಗಳು ಸಿಗಬೇಕಾಗದಲ್ಲಿ ಅದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು. ಈ ಯೋಗಕ್ಷೇಮ ಯಾತ್ರೆಯ ಮೂಲಕ ದೇಶ ಹಾಗೂ ರಾಜ್ಯದ ಎಲ್ಲಾ ವಿಚಾರವನ್ನು ಜನಸಾಮಾನ್ಯರ ಮುಂದೆ ಇಡುವ ಕೆಲಸ ನಡೆದಿದೆ. ಈ ವೇಳೆ ಜನರ ಪ್ರೀತಿ ವಿಶ್ವಾಸ ನಿರೀಕ್ಷೆಗೂ ಮೀರಿ ಲಭಿಸಿದೆ. ಅದನ್ನು ನಮಗೆ ನಂಬಲಿಕ್ಕೆ ಆಗುತ್ತಿಲ್ಲ. ಜಾತಿ ಮೀರಿ ಅಭಿವೃದ್ಧಿ ಮಂತ್ರದ ಆಧಾರದ ಮೇಲೆಯೇ ಕೃಷ್ಣರಾಜ ಕ್ಷೇತ್ರದ ಜನ ನನ್ನನ್ನು ನೋಡುತ್ತಿರುವುದು ನನಗೆ ಹೆಚ್ಚಿನ ಸಂತೋಷ ತಂದಿದೆ ಎಂದು ತಿಳಿಸಿದರು.
ಮುಂದಿನ ಹತ್ತು ವರ್ಷಗಳ ಕಾಲ ಕ್ಷೇತ್ರದಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡುಬಾರದ ರೀತಿಯಲ್ಲಿ ದೂರದೃಷ್ಟಿಯ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. ಜಾತಿ, ಧರ್ಮ ಮೀರಿ ಈ ಕ್ಷೇತ್ರದ ಜನ ನನನ್ನು ಮನೆ ಮಗನಂತೆ ಕಂಡಿದ್ದಾರೆ, ಆಶೀರ್ವದಿಸಿದ್ದಾರೆ. ಅದರಂತೆಯೇ ನಾನು ಶಾಸಕನಾಗಿದ್ದ ಅಷ್ಟೂ ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ ಎಂದರು. ಬೋರ್ವೆಲ್ ಮುಕ್ತ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಯಶಸ್ಸು ಸಾಧಿಸಿದ್ದೇವೆ. ಮಳೆಗಾಲದಲ್ಲಿ ವಾರ್ಡಿನ‌ ಹಲವೆಡೆ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಇದೀಗ ಆ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಹತ್ತು ಹಲವು ಯೋಜನೆಗಳನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗಿದೆ ಎಂದು ತಿಳಿಸಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತದ ಬಗ್ಗೆ ಒಂದು ಕಲ್ಪನೆ ಇಟ್ಟುಕೊಂಡಿದ್ದಾರೆ. ಆ ಕಲ್ಪನೆ ಸಾಕಾರಗೊಳ್ಳಬೇಕಾದರೆ ಅವರ ಮಾರ್ಗದಲ್ಲಿ ನಾವು ಹೆಜ್ಜೆ ಇಡಬೇಕು. ಅದಕ್ಕಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಇಚ್ಚೆ ಹಾಗೂ ಗುರಿ ನಮ್ಮದಾಗಬೇಕು ಎಂದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655.

Leave a Reply

Your email address will not be published. Required fields are marked *