ಮೈಸೂರು ಜಂಬೂಸವಾರಿಗೆ ಅರಮನೆ ಆವರಣದಲ್ಲಿನ ಸಕಲ ಸಿದ್ಧತೆ
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿಯ ಜಂಬೂಸವಾರಿಗೆ ಅರಮನೆ ಆವರಣದಲ್ಲಿನ ಸಕಲ ಸಿದ್ಧತೆಗಳನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿಗಳಾದ ಮುತ್ತುರಾಜ್, ಜಾಹ್ನವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು.
ವರದಿ:ನಂದಿನಿ ಮೈಸೂರು