
ನಟ ಸುದೀಪ್ ಅವರು ಸಿನಿಮಾದಲ್ಲಿ ಸಕ್ರಿಯವಾಗಿರುವುದು ಮಾತ್ರವಲ್ಲದೇ ಅನೇಕ ಸಮಾಜಮುಖಿ ಕಾರ್ಯಗಳನ್ನೂ ಮಾಡುತ್ತಾರೆ.
ನಟ ಸುದೀಪ್ ಅವರು ಸಿನಿಮಾದಲ್ಲಿ ಸಕ್ರಿಯವಾಗಿರುವುದು ಮಾತ್ರವಲ್ಲದೇ ಅನೇಕ ಸಮಾಜಮುಖಿ ಕಾರ್ಯಗಳನ್ನೂ ಮಾಡುತ್ತಾರೆ. ಅದಕ್ಕೆ ಈಗಾಗಲೇ ಅನೇಕ ಉದಾಹರಣೆಗಳು ಸಿಕ್ಕಿವೆ. ಈಗ ಮತ್ತೆ ಅಂಥದ್ದೇ ಘಟನೆ ನಡೆದಿದೆ. ಕ್ಯಾನ್ಸರ್ನಿಂದ ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿಯನ್ನು ಸುದೀಪ್ ಅವರು ಭೇಟಿ ಮಾಡಿದ್ದಾರೆ. ಆಕೆಯ ಆರೋಗ್ಯ ವಿಚಾರಿಸಿದ್ದಾರೆ. ಉಡುಗೊರೆ ಮತ್ತು ಆಟೋಗ್ರಾಫ್ ನೀಡುವ ಮೂಲಕ ಆ ಪುಟ್ಟ ಅಭಿಮಾನಿಯ ಮುಖದಲ್ಲಿ ನಗು ಮೂಡುವಂತೆ ಮಾಡಿದ್ದಾರೆ ಕಿಚ್ಚ ಸುದೀಪ್. ಈ ಸಂದರ್ಭದ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಕಿಚ್ಚ ಸುದೀಪ್ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ತಮ್ಮ ನೆಚ್ಚಿನ ನಟನನ್ನು ಒಮ್ಮೆಯಾದರೂ ಭೇಟಿಯಾಗಬೇಕು ಎಂಬುದು ಎಲ್ಲ ಅಭಿಮಾನಿಗಳ ಆಸೆ. ಆದರೆ ಎಲ್ಲರಿಗೂ ಅಂಥ ಅವಕಾಶ ಸಿಗುವುದಿಲ್ಲ. ತಮ್ಮ ವಿಶೇಷ ಅಭಿಮಾನಿಗಳ ಬಗ್ಗೆ ಸುದೀಪ್ ಅವರು ಯಾವಾಗಲೂ ಕಾಳಜಿ ವಹಿಸುತ್ತಾರೆ. ಬಾಲಕಿ ಸಾಕ್ಷಿ ಕೂಡ ಅಂಥ ಓರ್ವ ಅಭಿಮಾನಿ. ಆಕೆಯ ಬಯಕೆಯನ್ನು ತಿಳಿದುಕೊಂಡ ಸುದೀಪ್ ಅವರು ಆಸ್ಪತ್ರೆಗೆ ತೆರಳಿ ಭೇಟಿ ಮಾಡಿದ್ದಾರೆ

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.