
ಮಾಜಿ ಸಿಎಂ ಸಿದ್ದರಾಮಯ್ಯ ಒರೈಯನ್ ಮಾಲ್ ನ ಚಿತ್ರಮಂದಿರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ವೀಕ್ಷಿಸಿದರು.

ನಾಯಕ ನಟ ಕಾರ್ತಿಕ್ ಮಹೇಶ್, ನಾಯಕಿ ನಿಧಿ ಹೆಗಡೆ ಹಾಗೂ ಮಾಜಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ನನ್ನೊಂದಿಗೆ ಚಿತ್ರ ವೀಕ್ಷಿಸಿದರು.
ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನಿಮಾ ಅತ್ಯಂತ ಸೊಗಸಾಗಿ ಮೂಡಿಬಂದಿದೆ. ಚಿತ್ರ ತಂಡಕ್ಕೆ ನನ್ನ ಶುಭ ಹಾರೈಕೆಗಳು.
ನಾಡಿನ ಜಾನಪದ ಕಲೆಯನ್ನು ಜಗತ್ತಿನ ಮುಂದೆ ತೆರೆದಿಡುವಂತಹ ಚಿತ್ರ ನಿರ್ಮಾಣ ಮಾಡಿರುವ ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ ನಿರ್ಮಾಪಕರಾದ ಪವನ್ ಒಡೆಯರ್, ಅಪೇಕ್ಷಾ ಒಡೆಯರ್ ಅವರಿಗೆ ಅಭಿನಂದನೆಗಳು ಎಂದರು.
ವರದಿ : ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.