
ಎಚ್ಚರಿಕೆ-ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ.
ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಅಲ್ಲಲ್ಲಿ ಮಳೆಯಾಗುವ ಸಂಭವವಿದ್ದು, ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 5ರವರೆಗೆ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಎಂದಿನಂತೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವೇ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿಯೂ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆ ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಾಗಿರಲಿದೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.