
ಕಾರವಾರ : ಬೂತ್ ವಿಜಯ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ-ರೂಪಾಲಿ ನಾಯ್ಕ್

ಬೂತ್ ವಿಜಯ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಬಿಜೆಪಿ ಕಾರವಾರ ನಗರ ಮಂಡಲದ ವತಿಯಿಂದ ದೇವತಿಶಿಟ್ಟಾ, ಗುನಗಿವಾಡ, ಕೆಎಚ್‌ಬಿ ಕಾಲೋನಿಯ ಬೂತ್ ಸಂಖ್ಯೆ 75,76, 96 ಹಾಗೂ 97 ರಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.
ನಗರ ಮಂಡಲದ ವ್ಯಾಪ್ತಿಯ ಬೂತ್‌ಗಳಲ್ಲಿ ಸಮಿತಿಯ ಕಾರ್ಯವೈಖರಿ ಪರಿಶೀಲಿಸಲಾಯಿತು. ಬೂತ್ ತಂಡದ ಸದಸ್ಯರ ಮಾಹಿತಿ ಪಡೆದು ಪರಿಶೀಲಿಸಲಾಯಿತು. ಪಂಚರತ್ನ ಸಮಿತಿಯನ್ನೂ ಕೂಡ ಪರಿಶೀಲಿಸಿ ರಚನೆ, ಪೇಜ್ ಪ್ರಮುಖರ ನೇಮಕ, ವಾಟ್ಸ್‌ಪ ಗ್ರೂಪ್‌ಗಳ ರಚನೆ ಮಾಡಲಾಯಿತು. ಪಕ್ಷ ಸಂಘಟನೆಗೆ ನೀಡಿದ ಯೋಜನೆಯನ್ನು ಕಾರ್ಯಗಳನ್ನು ಶಕ್ತಿಮೀರಿ ಮಾಡಬೇಕು.

ಕೇಂದ್ರ, ರಾಜ್ಯ ಸರ್ಕಾರಗಳ ಯೊಜನೆಗಳನ್ನು ಮನೆ ಮನೆಗೂ ತಲುಪಿಸಿ, ಪಕ್ಷ ಬಲವರ್ಧನೆಗೆ ಶ್ರಮಿಸಬೇಕು. ಪಕ್ಷ ಸಂಘಟನೆಯಲ್ಲಿ ಬೂತ್ ಕಮಿಟಿ ಅಧ್ಯಕ್ಷರ ಮತ್ತು ಸದಸ್ಯರ ಪಾತ್ರ ಮಹತ್ವದ್ದಾಗಿರುತ್ತದೆ. ಪಕ್ಷವು ನೀಡಿದ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಜನರಿಗಾಗಿ ಸರ್ಕಾರಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪಿಂಚಣಿ, ವಿಧವಾ ವೇತನ ಸಂದ್ಯಾ ಸುರಕ್ಷ, ಆಯುಷ್ಮಾನ್ ಭಾರತ, ಉಜ್ವಲ ಯೋಜನೆ, ಕಿಸಾನ್ ಸಮ್ಮಾನ ಸೇರಿದಂತೆ ಹಿಂದುಳಿದ ವರ್ಗಗಳ ಏಳಿಗೆಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕಾರ್ಯವಾಗಬೇಕು.
ಈ ಸಂದರ್ಭದಲ್ಲಿ ಬಿಜೆಪಿ ಕಾರವಾರ ನಗರ ಮಂಡಲದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರದ ಪ್ರಮುಖರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪ್ರಮುಖರು, ಪಕ್ಷದ ಬೂತ್ ಕಮಿಟಿಯವರು, ಕಾರ್ಯಕರ್ತರು, ಉಪಸ್ಥಿತರಿದ್ದರು.
ವರದಿ: ಸಿಂಚನ ಕೆ

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :-ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.