ಇತಿಹಾಸ ಪ್ರಸಿದ್ಧ ಸಾಗರ ಮಾರಿಕಾಂಬಾ ದೇವಿಯ ಜಾತ್ರೆ 2023
ಸಾಗರ: ಇತಿಹಾಸ ಪ್ರಸಿದ್ಧ ಹಾಗೂ ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಗರದ ಮಾರಿಕಾಂಬಾ ದೇವಿಯ ಜಾತ್ರೆಯು ಮಂಗಳವಾರದಿಂದ ಪ್ರಾರಂಭಗೊಂಡಿದೆ. ಜನಸಾಗರದ ನಡುವೆ ಪ್ರಾರಂಭಗೊಂಡಿರುವ ಜಾತ್ರೆಯು ಮುಂದಿನ 9 ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.
ಜಾತ್ರೆಯು ಮುಂದಿನ 9 ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.
ಮಂಗಳವಾರ ಬೆಳಗ್ಗೆ 3 ಗಂಟೆಗೆ ಮಹಾಗಣಪತಿ ದೇವಾಲಯದಲ್ಲಿ ದೇವಿಯ ತಾಳಿ ಮತ್ತು ಆಭರಣಗಳಿಗೆ ಪೂಜೆ ಸಲ್ಲಿಸಿ, ಅರ್ಚಕ ರಮೇಶ್ ಭಟ್ಟರ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು.
ನಂತರ ಮಂಗಳವಾದ್ಯಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಮಂಗಳದ್ರವ್ಯಗಳನ್ನು ತರಲಾಯಿತು. ದೇವಿಯ ತವರು ಮನೆಯಲ್ಲಿ ಉತ್ಸವಮೂರ್ತಿಗೆ ಆಭರಣ ತೊಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ರಾತ್ರಿಯಿಂದಲೇ ಜನರು ದೇವಿಯ ದರ್ಶನಕ್ಕೆ ಸರದಿ ಸಾಲಿನಲ್ಲಿ ನಿಂತಿದ್ದರು.