
ಮಡಿಕೇರಿ ಜ.23 : ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯ ಕ್ರೀಡಾ ವಸತಿ ನಿಲಯಕ್ಕೆ ಹಾಕಿ ಕ್ರೀಡಾ ಪಟುಗಳ ಆಯ್ಕೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯ ಕ್ರೀಡಾ ವಸತಿ ನಿಲಯಕ್ಕೆ ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡೆಯಲ್ಲಿ 2023-24 ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯನ್ನು ತಾಲ್ಲೂಕು ಮಟ್ಟದಲ್ಲಿ ಫೆಬ್ರವರಿ, 08 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಫೆಬ್ರವರಿ, 09 ರಂದು ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ ಹಾಗೂ ಫೆಬ್ರವರಿ, 10 ರಂದು ಪೊನ್ನಂಪೇಟೆ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ ಆಯ್ಕೆ ನಡೆಯಲಿದೆ.
2023 ರ ಜೂನ್, 01 ಕ್ಕೆ 11 ವರ್ಷದೊಳಗಿರಬೇಕು. 2012 ರ ನಂತರ ಹುಟ್ಟಿದವರಾಗಿರಬೇಕು. 5 ನೇ ತರಗತಿಗೆ ಮಾತ್ರ ಪ್ರವೇಶ ನೀಡಲಾಗುವುದು. 140 ಸೆಂ.ಮೀ. ಎತ್ತರವಿರಬೇಕು. ಆಯ್ಕೆಯಲ್ಲಿ ಭಾಗವಹಿಸಲು ಬರುವ ಕ್ರೀಡಾಪಟುಗಳು 4ನೇ ತರಗತಿಯಲ್ಲಿ ಓದುತ್ತಿರುವ ದೃಢೀಕರಣ ಪತ್ರ ಶಾಲೆಯ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ ಕಡ್ಡಾಯವಾಗಿ ತರಬೇಕು. ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ದೈಹಿಕ ಸಾಮಥ್ರ್ಯದ ಬಗ್ಗೆ ಸರ್ಕಾರಿ ವೈದ್ಯರಿಮದ ವೈದ್ಯಕೀಯ ದೃಢೀಕರಣ ಪತ್ರ ಕಡ್ಡಾಯ ತರಬೇಕು.
ಹೆಚ್ಚಿನ ಮಾಹಿತಿಗೆ ದೂ.ಸಂ.08272-229985 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.