ಶಿವಮೊಗ್ಗ: ಶಿವಮೊಗ್ಗದಲ್ಲಿ ನಿಷೇದಾಜ್ಞೆ ಒಬ್ಬನಿಗೆ ಇರಿತ, ಸಾವರ್ಕರ್ ಭಾವಚಿತ್ರ ವಿಚಾರಕ್ಕೆ ಕೋಮುಗಳ ನಡುವೆ ಸಂಘರ್ಷ
ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಮತ್ತೆ ಗಲಾಟೆ ನಡೆದು, ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಚಿತ್ರವನ್ನು ಇಡಲು ಗುಂಪು ಮುಂದಾಗಿತ್ತು. ಗಲಾಟೆ ಜೋರಾಗುತ್ತಿದ್ದಂತೆ ಸಾವರ್ಕರ್ ಫೋಟೊವನ್ನು ತೆಗೆಯಲಾಯಿತು. ಟಿಪ್ಪು ಚಿತ್ರ ಇಡಲು ಪೊಲೀಸರು ಅವಕಾಶ ನೀಡಲಿಲ್ಲ. ಪ್ರತಿಭಟನೆ ಮತ್ತು ಗಲಭೆಗೆ ಮುಂದಾಗುತ್ತಿದ್ದಂತೆ ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು.
ಅಮೀರ್ ಅಹಮದ್ ಸರ್ಕಲ್‌ನಲ್ಲಿ ಎರಡು ಕೋಮುಗಳ ನಡುವೆ ಗಲಾಟೆ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144, ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಮತ್ತೆ ಗಲಾಟೆ ನಡೆದು, ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಚಿತ್ರವನ್ನು ಇಡಲು ಗುಂಪು ಮುಂದಾಗಿತ್ತು. ಗಲಾಟೆ ಜೋರಾಗುತ್ತಿದ್ದಂತೆ ಸಾವರ್ಕರ್ ಫೋಟೊವನ್ನು ತೆಗೆಯಲಾಯಿತು. ಟಿಪ್ಪು ಚಿತ್ರ ಇಡಲು ಪೊಲೀಸರು ಅವಕಾಶ ನೀಡಲಿಲ್ಲ.
ವರದಿ: ಸಿಂಚನಾ ಜಯಂತ್ ಬಲೇಗರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555