ಶಾಲೆಯ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ.

ಅಮೆರಿಕ: ಶಾಲೆಯ ಮೇಲೆ ದುಷ್ಕರ್ಮಿಗಳ ಗುಂಡಿನ ದಾಳಿಗೆ ಮೂವರು ವಿದ್ಯಾರ್ಥಿಗಳು ಸೇರಿ 6 ಮಂದಿ ಮೃತ್ಯು.

ಅಮೆರಿಕದ ನ್ಯಾಶ್ವಿಲ್ಲೆ ನಗರದ ಖಾಸಗಿ ಕ್ರಿಶ್ಚಿಯನ್ ಶಾಲೆಯಲ್ಲಿ ದುಷ್ಕರ್ಮಿಗಳಿಂದ ನಡೆದ ಗುಂಡಿನ ದಾಳಿಯಲ್ಲಿ 3 ವಿದ್ಯಾರ್ಥಿಗಳು ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣದ ಚಿಕಿತ್ಸೆಗಾಗಿ ಮನ್ರೋ ಕ್ಯಾರೆಲ್ ಜೂನಿಯರ್ ಮಕ್ಕಳ ಆಸ್ಪತ್ರೆಗೆ ಸಾಗಿಸಲಾಯಿತು. ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಘಟನಾ ಸ್ಥಳದಲ್ಲಿ ದಾಳಿಕೋರ ಮಹಿಳೆಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಘಟನೆಯ ನಂತರ, ಶಾಲೆಯಲ್ಲಿದ್ದ ಇತರ ವಿದ್ಯಾರ್ಥಿಗಳನ್ನು ಪೊಲೀಸ್ ರಕ್ಷಣೆಯಲ್ಲಿ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಯಿತು. ಈ ಹಿಂದೆಯೂ ಇಂತಹ ದಾಳಿಗಳು ಅಮೆರಿಕದಲ್ಲಿ ನಡೆದಿವೆ. ಜನವರಿಯಲ್ಲಿ ಅಮೆರಿಕದ ಅಯೋವಾದಲ್ಲಿ ಶಾಲೆಯೊಂದರಲ್ಲಿ ಮನಬಂದಂತೆ ಗುಂಡಿನ ದಾಳಿ ನಡೆದಿತ್ತು. ಇದರಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಓರ್ವ ಶಿಕ್ಷಕ ಗಂಭೀರವಾಗಿ ಗಾಯಗೊಂಡಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655.

Leave a Reply

Your email address will not be published. Required fields are marked *