ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ ಬಳೆ ಅರಿಶಿನ ಕುಂಕುಮ ಬಾಗಿನ ಸಮರ್ಪಣೆ

ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ ಬಳೆ ಅರಿಶಿನ ಕುಂಕುಮ ಬಾಗಿನ ಸಮರ್ಪಣೆ

ಧಾರ್ಮಿಕ ಪರಂಪರೆ ಉಳಿಯಬೇಕಾದರೆ ಪರಿಸರ ಸಂರಕ್ಷಣೆಯೂ ಸಹ ಬಹಳ ಮುಖ್ಯವಾಗುತ್ತದೆ: ಜೀವದಾರ ಗಿರೀಶ್

ಶ್ರೀದುರ್ಗಾ ಫೌಂಡೇಶನ್ ವತಿಯಿಂದ ಆಷಾಡ ಮಾಸದ ಮಾಸದ ಪ್ರಯುಕ್ತ ಪ್ರತಿ ವರ್ಷದಂತೆ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ ಬಳೆ ಅರಿಶಿನ ಕುಂಕುಮ ಬಾಗಿನ ಸಮರ್ಪಣೆ ಮಾಡಲಾಯಿತು,

ಇದೇ ಸಂಧರ್ಭದಲ್ಲಿ
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್
ಮಾತನಾಡಿ ಪುರಾಣಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಆಷಾಡ ಮಾಸದಲ್ಲಿ ಚಾಮುಂಡಿ ದೇವಿಗೆ ವಿಶೇಷ ಪ್ರಾರ್ಥನೆ ಪೂಜಾ ಕೈಂಕರ್ಯ ಸೇವೆ ಸಲ್ಲಿಸಲು ಮಹಿಳೆಯರು ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ, ಪ್ರತಿನಿತ್ಯ ಸೇವೆ ಸಲ್ಲಿಸುವ ಮಹಿಳಾ ಭದ್ರತಾ ಸ್ವಚ್ಛತಾ ಸಿಬ್ಬಂದಿಗಳನ್ನ ಗೌರವಿಸಿ ಬಾಗಿನ ಸಮರ್ಪಣೆ ನೀಡುತ್ತಿರುವುದು ಅರ್ಥಪೂರ್ಣವಾದ ಆಚರಣೆ ಎಂದರು, ಬೆಟ್ಟಕ್ಕೆ ಬರುವ ಭಕ್ತಧಿಗಳು ಭಕ್ತಿ ಮನೋಭಾವ ಜೊತೆಯಲ್ಲೆ ಪ್ಲಾಸ್ಟಿಕ್ ತರದ ಹಾಗೇ ಪರಿಸರ ಸಂರಕ್ಷಣೆ ಕಾಳಜಿ ಸಂಕಲ್ಪ ತೊಡಬೇಕು, ಧಾರ್ಮಿಕ ಪರಂಪರೆ ಉಳಿಯಬೇಕಾದರೆ ಪರಿಸರ ಸಂರಕ್ಷಣೆಯೂ ಸಹ ಬಹಳ ಮುಖ್ಯವಾಗುತ್ತದೆ ಎಂದರು

ನಂತರ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ರವರು ಮಾತನಾಡಿ ಮಹಿಳೆಯರಲ್ಲಿ ಧರ್ಮ ಜಾಗೃತಿ ಮತ್ತು ಧಾರ್ಮಿಕ ಸಾಮರಸ್ಯದ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಪ್ರತಿವರ್ಷದಂತೆ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಆಯೋಜಿಸುತ್ತಾ ಬಂದಿದ್ದಿದೇವೆ ಮುಂದಿನ ದಿನದಲ್ಲಿ ಮಹಿಳಾ ಸಂಘಟನೆಗಳ ಸಹಯೋಗದೊಂದಿಗೆ ಶಾಲಾ ಕಾಲೇಜಿನ ವಿದ್ಯಾರ್ಥಿನಿಯರು ಮತ್ತು ಮಹಿಳಾ ಕಾರ್ಮಿಕರಲ್ಲಿ ಅರಿಶಿನ ಕುಂಕುಮದ ಮಹತ್ವ ಮತ್ತು ಪುರಾಣ ಪ್ರಸಿದ್ಧ ಹಬ್ಬಗಳ ಪರಂಪರೆ ಮತ್ತು ಆಚರಣೆಯ ಮಹತ್ವ ಸಾಮರಸ್ಯದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು, ಚಾಮುಂಡಿ ಬೆಟ್ಟದ ಪರಿಸರ ಸೌಂದರ್ಯ ಕಾಪಾಡಲು ಸರ್ಕಾರ ಪ್ಲಾಸ್ಟಿಕ್ ಬಳಕೆಯನ್ನ ಸಂಪೂರ್ಣ ನಿಷೇಧಿಸಿದೆ ಅದರ ನಿಯಮಗಳನ್ನ ಸಾರ್ವಜನಿಕರು ಪಾಲಿಸಿ ಕೈಜೋಡಿಸಿದರೇ ಮಾತ್ರ ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತವಲಯವಾಗುತ್ತದೆ ಎಂದರು

ಇದೇ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಹಾಗೂ ಮುತ್ತಣ್ಣ, ಸಮಾಜಸೇವಕರಾದ ಕುಮಾರ್, ಕೋಲಾರ ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಲತಾ ಬಾಯಿ ಮಾಹಡಿಕ್,ಅಂಬಾಭವಾನಿ ಮಹಿಳಾ ಸಮಾಜದ ಅಧ್ಯಕ್ಷ ಸವಿತಾ ಘಾಟ್ಕೆ , ಶಿವು, ಶಿಕ್ಷಕರಾದ ದೀಪ, ಹಾಗೂ ಇನ್ನಿತರರು ಭಾಗವಹಿಸಿದರು

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *