ಹವಾಮಾನ ವರದಿ : ಇನ್ನಾದರೂ ಬಂದೀತೇ ಮಳೆ…?? ಹವಾಮಾನ ಇಲಾಖೆಯಿಂದ ಮುನ್ಸೂಚನೆ.

ಹವಾಮಾನ ವರದಿ : ಇನ್ನಾದರೂ ಬಂದೀತೇ ಮಳೆ…?? ಹವಾಮಾನ ಇಲಾಖೆಯಿಂದ ಮುನ್ಸೂಚನೆ.

ಬಿಸಿಲ ಬೇಗೆಗೆ ಕಾದು ಕೆಂಪಾಗಿರುವ ಇಳೆಗೆ ಮಳೆಯ ಸಿಂಚನವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇಂದಿನಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರದಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಾಗಲಕೋಟೆ, ಕಲಬುರ್ಗಿ, ಬೀದರ್, ಬೆಳಗಾವಿ, ರಾಯಚೂರು, ಕೊಪ್ಪಳ, ಯಾದಗಿರಿ, ಜಿಲ್ಲೆಗಳಲ್ಲಿ ಏಪ್ರಿಲ್ 29 ರವರೆಗೆ ಗುಡುಗು ಮಿಂಚು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಲಕ್ಷಣ ಕಡಿಮೆ ಇದ್ದು, ಎ.28ರ ನಂತರ ಮಳೆ ನಿರೀಕ್ಷಿಸಬಹುದಾಗಿದೆ. ಕರಾವಳಿ ಕರ್ನಾಟಕದಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, ಜಲಮೂಲಗಳು ಬತ್ತಿ ಜಲಚರಗಳು ಅಸುನೀಗುತ್ತಿವೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *